ಲೋಕಸಭಾ ಚುನಾವಣೆ: ಕೆ ಆರ್ ಎಸ್ ಪಕ್ಷ ಸಂದರ್ಶನ --- ಆಶಾ ವೀರೇಶ್

ವರದಿ - ಮಂಜುನಾಥ ಕೋಳೂರು ಕೊಪ್ಪಳ

 ಕೊಪ್ಪಳ ಡಿ 29 : - ಮುಂಬರುವ ಲೋಕಸಭಾ ಚುನಾವಣೆಗೆ ಅಹ೯ ಹಾಗೂ ಆಸಕ್ತ ಅಭ್ಯರ್ಥಿಗಳ ಆಯ್ಕೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ( ಕೆ ಆರ್ ಎಸ್ ಪಕ್ಷ ) ಜನವರಿ 6 ಮತ್ತು 7 ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ನಮ್ಮ ಪಕ್ಷದ ಕಚೇರಿಯಲ್ಲಿ ಸಂದರ್ಶನ ಹಮ್ಮಿಕೊಂಡಿದೆ . ಚುನಾವಣೆಗೆ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು . ಯಾವ ರೀತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಅನ್ನೋದರ ಬಗ್ಗೆ ಇತ್ತೀಚಿಗೆ ನಡೆದ ಪಕ್ಷದ ಆಂತರಿಕ ಸಭೆಯಲ್ಲಿ ತೀರ್ಮಾನಿಸಲಾಗಿದ್ದು . ಇದಕ್ಕಾಗಿ ಸಂದರ್ಶನ ನಿಯೋಜನೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷೆ ಆಶಾ ವೀರೇಶ್ ನಗರದ ಪತ್ರಿಕ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂದರ್ಶನಕ್ಕೆ ಹಾಜರಾಗಲು ಹಾಲಿ ಸದಸ್ಯರಿಗೆ 5 ಸಾವಿರ ಹಾಗೂ ಈಗ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾದಂತ ಆಕಾಂಕ್ಷಿಗಳಿಗೆ 10 ಸಾವಿರ ರೂಪಾಯಿ ಶುಲ್ಕವಿರುತ್ತದೆ . ತದನಂತರ ಪಕ್ಷದ ರಾಜ್ಯ ಸಮಿತಿ ನೇತೃತ್ವದಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮ ಗೊಳಿಸುತ್ತದೆ. ಇಂದಿನ ರಾಜಕಾರಣದ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವೇ ತುಂಬಿ ತುಳುಕಾಡುತ್ತಿದೆ . ನಮ್ಮ ಪಕ್ಷ ಇದೇ ವಿಷಯ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದೆ ಎಂದು ಹೇಳಿದರು . ಅಭ್ಯರ್ಥಿಯಾಗ ಬಯಸುವ ಆಸಕ್ತರು 9611720802 ಈ ಮೊಬೈಲ್ ನಂಬರ್ ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು . ಪತ್ರಿಕಾಗೋಷ್ಠಿಯಲ್ಲಿಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಭಾವನ ಶಾಸ್ತ್ರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಎಚ್ ಕೊಡಚನಹಳ್ಳಿ , ಜಿಲ್ಲಾ ಕಾರ್ಯದರ್ಶಿಗಳಾದ ನಾಗರಾಜ್ ಎಸ್ ಕಮ್ಮಾರ್ ಹಾಗೂ ಗಣೇಶ್ , ಗವಿಸಿದ್ದಪ್ಪ ಪುಟಗಿ ಪಾಲ್ಗೊಂಡಿದ್ದರು .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ