ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ
ಕೊಟ್ಟೂರು: ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಂದು 75ನೇ ಗಣರಾಜ್ಯೋತ್ಸವವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ ರವರು 75ನೇ ಗಣರಾಜ್ಯೋತ್ಸವ ದಿನಾಚರಣೆ ಗೆ ಶುಭ ಕೋರಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಧ್ವಜಾರೋಹಣ ಮಾಡಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಂ ರವಿಕುಮಾರ ಭಾರತಕ್ಕೆ ಸಂವಿಧಾನ ಕುರಿತಂತೆ ಸಂವಿಧಾನ ರಚನೆಗೆ ಕಾರಣರಾದ ಕರಡು ಸಮಿತಿ ಅಧ್ಯಕ್ಷರಾದ ಡಾ. ಬಿ.ಆರ್ .ಅಂಬೇಡ್ಕರ್ ಹಾಗೂ ಭಾರತದ ಮೊದಲನೇ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರನ್ನು ಸ್ಮರಿಸಿದರು. ಹಾಗೂ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗ ಹಾಗೂ ಮೂಲಭೂತ ಹಕ್ಕುಗಳು ತತ್ವಗಳನ್ನು ಕುರಿತು ವಿದ್ಯಾರ್ಥಿಗಳಿಗೆ ಅವರ ಜವಾಬ್ದಾರಿ ಅರಿಯುವಂತೆ ಕರೆ ನೀಡಿದರು,
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರುಗಳಾದ ಕೆ .ಬಿ. ಮಲ್ಲಿಕಾರ್ಜುನ್, ಅಡಿಕೆ ಮಂಜುನಾಥಯ್ಯ, ಡಿ .ಎಸ್. ಶಿವಮೂರ್ತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪದವಿ ಪೂರ್ವ ಪ್ರಾಚಾರ್ಯರಾದ ಎಂ. ಎಚ್. ಪ್ರಶಾಂತ್ ಕುಮಾರ್,ಹಿರಿಯ ಉಪನ್ಯಾಸಕರುಗಳಾದ ಡಿ. ರವೀಂದ್ರ ಗೌಡ, ಕೃಷ್ಣಪ್ಪ, ಜೆ. ಬಿ. ಸಿದ್ದನಗೌಡ, ಪೃಥ್ವಿರಾಜ್, ಡಾ. ಶಿವಕುಮಾರ್, ಶ್ರೀಮತಿ ವಿಜಯಲಕ್ಷ್ಮಿ ಸಜ್ಜನ್, ಬಸವರಾಜ ಬಣಕಾರ್ ಉಮೇಶ್, ಹಾಗೂ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ, ಎನ್ .ಸಿ. ಸಿ .ಕೆಡೆಟ್ಸ್, ಗಳು ಪತ ಸಂಚಲನ ಮಾಡಿ ಗೌರವ ವಂದನೆ ಸಲ್ಲಿಸಿದರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಕೆ.ಎಂ. ಪ್ರಭಾಕರ್ ನಿರ್ವಹಿಸಿದರೆ ವಿದ್ಯಾರ್ಥಿನಿ ಕುಮಾರಿ ಚೈತ್ರ ಪ್ರಾರ್ಥಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ