"ತಾಲೂಕು ಆಡಳಿತ ವತಿಯಿಂದ 75ನೇ ಗಣರಾಜ್ಯೋತ್ಸವ ಆಚರಣೆ "

ಕೊಟ್ಟೂರು ತಾಲೂಕಿನ ಪಟ್ಟಣದ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದ ಕಾರ್ಯಕ್ರಮ ಶುಕ್ರವಾರ ರಂದು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ನಿಮಿತ್ತ ತಾಲೂಕು ದಂಡಾಧಿಕಾರಿಗಳಾದ ಅಮರೇಶ್ ಜಿ ಕೆ ಮತ್ತು ಶಾಸಕರಾದ ಕೆ ನೇಮಿರಾಜ್ ನಾಯ್ಕ್ ಧ್ವಜಾರೋಹಣ ನೆರವೇರಿಸಿದರು.

ತಾಲೂಕಿನ ಜೂನಿಯರ್ ಕಾಲೇಜ್ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ ಅವರು ಪಥಸಂಚಲನ ನಡೆಸಿದರು.

ಈ ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ 15 ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಹಗರಿಬೊಮ್ಮನಹಳ್ಳಿ, ಮರಿಯಮ್ಮನಹಳ್ಳಿ ಕಾರ್ಯಕ್ರಮಕ್ಕೆ ಹೋಗುವ ಸಲುವಾಗಿ ಸಮಯದ ಅಭಾವದಿಂದ ಕಾರ್ಯಕ್ರಮದಲ್ಲಿ ಕೆಲವೊಂದು ಬದಲಾವಣೆಗಳಿಂದ ಗೊಂದಲ ವಾತಾವರಣ ನಿರ್ಮಾಣವಾಗಿತ್ತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಯಾದ ಎ ನಸರುಲ್ಲಾ, ಸಿಪಿಐ ವೆಂಕಟಸ್ವಾಮಿ, ಇಸಿಓ ಅಜ್ಜಪ್ಪ, ನಿಂಗಪ್ಪ, ಡಿ ಆ‌ರ್ ಪಿ ಮತ್ತು ಸಿಆರ್ಪಿ , ಶಶಿಧರ್ ಮೈದೂರು ಸೇರಿದಂತೆ  ತಾಲೂಕು ಆಡಳಿತ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ