75 ನೇ ಗಣರಾಜ್ಯೋತ್ಸವದ ಅಂಗವಾಗಿ "ಮಣಿ " ಯವರಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ.

ಕೊಟ್ಟೂರು:- 75 ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ನಗರದ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮಾಜ ಸೇವಕರಾದ ಮಣಿ ಯವರಿಂದ ಪೆನ್ನು ಪುಸ್ತಕ ವಿತರಿಸಿ 75 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಮುತ್ತೇಶ್ ರವರು ಡಾ.ಬಿ.ಆರ್.ಅಂಬೇಡ್ಕರ್ ಹೇಳಿರುವಂತೆ ‘‘ಶಿಕ್ಷಣದಿಂದ ಯಾರನ್ನೂ ಸಹ ವಂಚಿತರನ್ನಾಗಿ ಮಾಡಬಾರದು,ಇದು ಈ ದೇಶದ ಎಲ್ಲಾ ಜನರನ್ನು ತಲುಪಬೇಕು ಮತ್ತು ಶೋಷಿತ ವರ್ಗದವರು ಅದನ್ನು ಕನಿಷ್ಠ ವೆಚ್ಚದಲ್ಲಿ ಪಡೆಯುವಂತಿರಬೇಕು.’’ ಆದ್ದರಿಂದ ಅವರು ಸಂವಿಧಾನದಲ್ಲಿ ಶಿಕ್ಷಣವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿ ನೀಡಿದರು . ಎಂದರು 

ಶಿಕ್ಷಣ ಸ್ವಾತಂತ್ರ್ಯವನ್ನು ರಕ್ಷಿಸುವ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮೇಲೆತ್ತಲು ಇರುವ ಸಾಧನವಾಗಿದೆ. ಶಿಕ್ಷಣದಿಂದ ಒಬ್ಬ ವ್ಯಕ್ತಿ ಜೀವನದಲ್ಲಿ ಉತ್ತಮ ಬೆಳಕು ಕಾಣಬಹುದು. ಶಿಕ್ಷಣ ದೂರ ದೃಷ್ಟಿಕೋನ ಮತ್ತು ಬುದ್ಧಿವಂತಿಕೆಯನ್ನು ಬೆಳೆಸುತ್ತದೆ.

ಶಿಕ್ಷಣ ಕೇವಲ ಜ್ಞಾನಕ್ಕಾಗಿ ಅಲ್ಲ, ಮಾನವನಲ್ಲಿ ಜ್ಞಾನ ವೃದ್ಧಿಯ ಜೊತೆಗೆ ನೀತಿ, ಸನ್ನಡತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದೇ ಶಿಕ್ಷಣ. ಪ್ರತಿಯೊಬ್ಬ ವ್ಯಕ್ತಿ ಪ್ರಜ್ಞಾವಂತ ನಾಗಿರಬೇಕು, ಪಡೆದ ಶಿಕ್ಷಣ ಒಬ್ಬ ವ್ಯಕ್ತಿಯನ್ನು ಮುಕ್ತ ಮನಸ್ಸಿನಿಂದ ತಾರ್ಕಿಕವಾಗಿ ಹಾಗೂ ಮುಕ್ತವಾಗಿ ಆಲೋಚಿಸುವಂತೆ ಮಾಡುವುದೇ ಆಗಿದೆ. ಶಿಕ್ಷಣ ಪಡೆದು ಪ್ರತಿಯೊಬ್ಬ ವ್ಯಕ್ತಿ ಸಮಾಜದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ಮತ್ತು ನೈತಿಕ ಬೆಳವಣಿಗೆ ಸಾಧ್ಯವಾಗುವುದು,ಇದರಿಂದ ಸದೃಢ ಸಮಾಜ,ರಾಷ್ಟ್ರವನ್ನು ಕಟ್ಟುವುದು ಸಾಧ್ಯವಾಗುವುದು ಅಂಬೇಡ್ಕರ್ ಅವರ ನಿಲುವಾಗಿತ್ತು ಎಂದು ತಿಳಿಸಿದರು.

ಹಾಗೆ ವಿಧ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಮಣಿ ಯವರಿಗೆ ಅಭಿನಂದನೆ ಸಲ್ಲಿಸಿ

ಈ ರೀತಿಯ ಪ್ರೋತ್ಸಾಹ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಬೇಕಾಗಿದೆ.ನಮ್ಮ ಶಾಲೆಯಲ್ಲಿ ಓದುತ್ತಿರುವ ವಿಧ್ಯಾರ್ಥಿಗಳು ತುಂಬಾ ಕಡು ಬಡತನದಲ್ಲಿ ಜೀವನ ಮಾಡುತ್ತಿರುವ ಕೂಲಿಕಾರರ ಮಕ್ಕಳಾಗಿದ್ದು ಇಂತಹ ಮಕ್ಕಳನ್ನು ಗುರುತಿಸಿ ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು  ಸಮಾಜ ಸೇವಕರಾದ ಮಣಿ ಯವರು ವಿದ್ಯಾರ್ಥಿಗಳಿಗೆ ಪೆನ್ನು ಪುಸ್ತಕ ಕೊಟ್ಟು ಒಂದು ಒಳ್ಳೆ ರೀತಿಯಲ್ಲಿ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವ ನಿಮಗೆ ನಮ್ಮ ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿಂದ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿ ಶುಭ ಹಾರೈಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ