ಸಂವಿಧಾನದ ಆಶಯ ವಿರುದ್ಧ ನಡೆದುಕೊಳ್ಳುತ್ತಿರುವ ಪ್ರಧಾನಿ ಮೋದಿ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಜರುಗಿಸಲಿ - ಸಂತೋಷ್ ಹಿರೇದಿನ್ನಿ
ಮಸ್ಕಿ : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಂವಿಧಾನ ದತ್ತವಾದ ಹುದ್ದೆಯಲ್ಲಿದ್ದು, ಒಂದೇ ಧರ್ಮ- ಜಾತಿ ಜನಾಂಗಕ್ಕೆ ಸೀಮಿತವಾಗಿ ವರ್ತಿಸುತ್ತಿದ್ದಾರೆ. ಇದು ದೇಶದ ಅತ್ಯುನ್ನತ ಸ್ಥಾನ ವಾಗಿರುವ ಪ್ರಧಾನಿ ಹುದ್ದೆಗೆ ಶೋಭೆ ತರುವುದಿಲ್ಲ. ಆದ್ದರಿಂದ, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಮುಂದೆ ಕರ್ನಾಟಕ ರೈತ ಸಂಘ ಮಸ್ಕಿ ತಾಲೂಕು ಅಧ್ಯಕ್ಷ ಸಂತೋಷ್ ಹಿರೇದಿನ್ನಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯ.
ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟ ಹಾಗೂ ಜಾತ್ಯಾತೀತ ರಾಷ್ಟ್ರವಾಗಿ ಜಗತ್ತಿಗೆ ಮಾದರಿಯಾಗಿದೆ. ಧರ್ಮ ನಿರಾಪೇಕ್ಷೆಯಾಗಿದೆ. ಅಂದರೆ ಧರ್ಮವನ್ನು ರಾಜಕಾರಣದಲ್ಲಿ ಬೆರೆಸುವ ಹಾಗಿಲ್ಲ. ಆದರೆ, ಇಂದು ಪ್ರಧಾನಿ ಮೋದಿ ರಾಮಮಂದಿರದ ಉದ್ಘಾಟನೆಗೆ ಇಡೀ ಸರ್ಕಾರಿ ವ್ಯವಸ್ಥೆ ಸಮೇತ ಹೊರಟಿದ್ದಾರೆ. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿರುವ ನಮ್ಮ ದೇಶದ ಪ್ರಧಾನ ಮಂತ್ರಿಗಳು ದೇಶದಲ್ಲಿ ಸರ್ವ ಜಾತಿ ಜನಾಂಗದವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ. ಸಂವಿಧಾನದ ಪ್ರಕಾರ ನಮ್ಮಪ್ರಧಾನ ಮಂತ್ರಿಗಳು ಅಯೋಧ್ಯೇಯ ನಿರ್ಮಿಸಲಾಗುತ್ತಿರುವ ಖಾಸಗಿ ರಾಮ ಮಂದಿರ ಉದ್ಘಾಟನೆ ಸೇರಿದಂತೆ ವಿವಿಧ ಪೂಜೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಜಾತಿವಾದಿ ಹಾಗೂ ಅಸಮಾನತೆ ನಿಗಮವಾದ ಸನಾತನ ಧರ್ಮಕ್ಕೆ ಹೆಚ್ಚಿನ ಹೊತ್ತು ನೀಡುತ್ತಿದ್ದು,ದೇಶದ ಅಭಿವೃದ್ಧಿ ಮರೆತ್ತಿದ್ದಾರೆ. ಹಾಗಾಗಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಕೂಡಲೇ ಮಧ್ಯಪ್ರವೇಶಿಸಿ, ಮೋದಿ ಹಾಗೂ ಮೋದಿ ಸರ್ಕಾರ ಮಂದಿರ ಪೂಜೆಗೆ ತೆರಳದಂತೆ ಕ್ರಮ ಜರುಗಿಸಬೇಕೆಂದು ಕರ್ನಾಟಕ ರೈತ ಸಂಘ ಈ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹಿಸುತ್ತದೆ ಎಂದು ಕರ್ನಾಟಕ ರೈತ ಸಂಘ ಮಸ್ಕಿ ತಾಲೂಕು ಅಧ್ಯಕ್ಷ ಸಂತೋಷ್ ಹಿರೇದಿನ್ನಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ