ಅರ್ಥಗರ್ಭಿತ ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಡಾ.ಕೆ.ಮಲ್ಲಪ್ಪ ತಹಶೀಲ್ದಾರ್
ಮಸ್ಕಿ: ತಾಲೂಕಡಳಿತದಿಂದ ವಿಶಿಷ್ಟ ಮತ್ತು ಅರ್ಥಗರ್ಭಿತವಾಗಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಗ್ರೇಡ್-2 ತಹಶೀಲ್ದಾರರು ಡಾ.ಕೆ.ಮಲ್ಲಪ್ಪ ಹೇಳಿದರು.
ತಾಲೂಕು ದಂಡಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಜರುಗಿದ ಪೂರ್ವಭಾವಿ ಸಭೆಯಲ್ಲಿ ನೇತೃತ್ವ ವಹಿಸಿದ್ದ ಗ್ರೇಡ್_ 2 ತಹಸೀಲ್ದಾರ್ ಡಾ.ಕೆ. ಮಲ್ಲಪ್ಪ ಮಾತನಾಡಿ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು
ಸಂಘ - ಸಂಸ್ಥೆಗಳು ಕೈಜೋಡಿಸಿ ಗಣರಾಜ್ಯೋತ್ಸವ ಯಶಸ್ವಿಗೆ ಸಹಕರಿಸಬೇಕು ಎಂದು ಕೋರಿದರು.
ಪಟ್ಟಣದ ಸರ್ಕಾರಿ ಮಹಿಳಾ ಪ್ರೌಢಶಾಲೆ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕಳೆದ ಬಾರಿಯಂತೆ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಬೆಳಗಿನ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು.
ಅದೇ ರೀತಿ ಸ್ತಬ್ಧಚಿತ್ರಗಳನ್ನು ಸಹ ವಿಷಯಾಧರಿತವಾಗಿ, ಆಕರ್ಷಣೀಯವಾಗಿ ನಿರ್ಮಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವುದು, ಜತೆಗೆ ಸ್ವಚ್ಛತೆ ಸಂಬಂಧ ಅಗತ್ಯವಿರುವ ಕಡೆ ಕಸದಬುಟ್ಟಿ ಇಡುವುದು ಮತ್ತಿತರ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡುವಂತೆ ನಿರ್ದೇಶನ ನೀಡಲಾಯಿತು.
ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಪ್ರತಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ತೊಡಗಿಸಿಕೊಳ್ಳಬೇಕಿದೆ ಎಂದು ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಡಾ. ಕೆ.ಮಲ್ಲಪ್ಪ ಗ್ರೇಡ್ - 2 ತಹಶೀಲ್ದಾರರು, ಶಿರಸ್ತೇದಾರರಾದ ವಿಜಯಕುಮಾರ ಸಜ್ಜನ್, ಅಖ್ತರ್ ಅಲಿ, ವಿವಿಧ ಸಂಘಟನೆಗಳ ಸಂಘ - ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ