ಮಕ್ಕಳ ಪಾಲನೆ ಪೋಷಣೆಯಲ್ಲಿ ಇರಲಿ ಜಾಗೃತಿ ಶಿಶು ಪಾಲಕಿಯರಿಗೆ ಸಹಾಯಕ ನಿರ್ದೇಶಕರ ಸಲಹೆ
ಮಸ್ಕಿ : ಉದ್ಯೋಗ ಖಾತ್ರಿ ಯೋಜನೆಯ ಮಹಿಳಾ ಕೂಲಿಕಾರರ ಅನುಕೂಲಕ್ಕಾಗಿ ಆರಂಭಿಸುತ್ತಿರುವ ಶಿಶು ಪಾಲನಾ ಕೇಂದ್ರಗಳ ನಿರ್ವಹಣೆಗೆ ಶಿಶು ಪಾಲಕಿಯರು ಮುಂಜಾಗ್ರತೆ ವಹಿಸಬೇಕು ಎಂದು ಮಸ್ಕಿ ತಾ.ಪಂ ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಶಿವಾನಂದರಡ್ಡಿ ಸಲಹೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿರುವ ಶಿಶು ಪಾಲಕಿಯರ ತರಬೇತಿ ಕಾರ್ಯಾಗಾರಕ್ಕೆ ಸಸಿಗೆ ನೀರು ಎರೆಯುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಯಾರು ಇಲ್ಲದ ಸಮಯದಲ್ಲಿ ಅನಿವಾರ್ಯವಾಗಿ ಮಹಿಳೆಯರು ಉದ್ಯೋಗ ಖಾತ್ರಿ ಕೆಲಸದ ಸ್ಥಳಕ್ಕೆ ಮಕ್ಕಳನ್ನು ಕರೆ ತರುತ್ತಿದ್ದಾರೆ. ಇದನ್ನು ತಪ್ಪಿಸಿ ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವುದರ ಜೊತೆಗೆ ಪೌಷ್ಠಿಕ ಆಹಾರ ಒದಗಿಸಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಶಿಶು ಪಾಲಕಿಯರು ತಾಳ್ಮೆ ಕಳೆದುಕೊಳ್ಳದೇ ಮಕ್ಕಳ ಪಾಲನೆಗೆ ಕಾಳಜಿ ವಹಿಸಬೇಕು. ಶಿಶು ಪಾಲನಾ ಕೇಂದ್ರಕ್ಕೆ ಅಗತ್ಯ ಇರುವ ಪರಿಕರಗಳ ಖರೀದಿಗೆ ಕ್ರಮ ವಹಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮಾಸ್ಟರ್ ಟ್ರೈನರ್‌ಗಳಾದ ಸುನೀತಾ, ರಾಜೇಶ್ವರಿ ಅವರು ತರಬೇತಿ ನೀಡಿದರು. ತಾ.ಪಂ ಸಿಬ್ಬಂದಿ ಬಸವರಾಜ್, ಸತೀಶ್ ಇತರರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ