*ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಬೇಡ: ಶಾಸಕ ಡಾ ಶ್ರೀನಿವಾಸ್ ಎನ್ ಟಿ*

*ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ಗಮನ ಸೆಳೆದವು*

ಕೂಡ್ಲಿಗಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕೀಳಿರಿಮೆ ಇರಬಾರದು. ರಾಷ್ಟ್ರಮಟ್ಟದ ವಿವಿಧ ಕ್ಷೇತ್ರಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚು ಗಮನ ಸೆಳೆದಿದ್ದಾರೆ ಎಂದು ಶಾಸಕ ಡಾ ಎನ್ ಟಿ ಶ್ರೀನಿವಾಸ್ ಹೇಳಿದರು. ತಾಲೂಕಿನ ಜರ್ಮಲಿ ಗ್ರಾ.ಪಂ ವ್ಯಾಪ್ತಿಯ ಗೆದ್ದಲಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ಗಣಿತ ಪ್ರಯೋಗಾಲಯ, ವಿಜ್ಞಾನ ವಸ್ತು ಪ್ರದರ್ಶನ, ಹೈಟೆಕ್ ಶೌಚಗೃಹ, ಮತ್ತು ಶಾಲೆ ಕಾಂಪೌಂಡನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ವ್ಯಾಪ್ತಿಯ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ತಂದು ಉನ್ನತಿಗಾಗಿ ಶ್ರಮಿಸುತ್ತೇನೆ. ಗ್ರಾಪಂ ನರೇಗಾ ಯೋಜನೆ ಅಡಿಯಲ್ಲಿ ಅನುದಾನ ಬಳಸಿಕೊಂಡು ಸರ್ಕಾರಿ ಶಾಲೆಯಲ್ಲಿ ಹೈಟೆಕ್ ಶೌಚಗೃಹ ನಿರ್ಮಿಸಿರುವುದು ನಮ್ಮ ತಾಲೂಕಿನ ಜರ್ಮಲಿ ಗ್ರಾ.ಪಂ ಮಾದರಿಯಾಗಿದೆ ಎಂದರು.  ಈ ವೇಳೆ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾದ ಭಾಗ್ಯಮ್ಮ ಮತ್ತು ಪಲ್ಲವಿ ಅವರನ್ನು  ಸನ್ಮಾನಿಸಿ ನಗದು ಬಹುಮಾನ ನೀಡಿದ ಶಾಸಕರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಾವು ತಯಾರಿಸಿದ ವಿಜ್ಞಾನ ಮಾದರಿಗಳು ಶಾಸಕರು ವಿದ್ಯಾರ್ಥಿಗಳನ್ನು ಗಮನ ಸೆಳೆದವು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಚನ್ನಮ್ಮ ರಾಮಪ್ಪ, ಉಪಾಧ್ಯಕ್ಷೆ ಪಾಪಕ್ಕ ಬಸವರಾಜ, ಸದಸ್ಯರಾದ ರಾಮಸ್ವಾಮಿ, ಪಂಕಜಾ ತಿಪ್ಪೇಸ್ವಾಮಿ, ಬಸವರಾಜಪ್ಪ, ಜರ್ಮಲಿ ವಿಎಸ್‌ಎಸ್‌ಎನ್ ಅಧ್ಯಕ್ಷ ಹನುಮಂತರಾಯ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ.ಶಿವಾನಂದ, ತಾಲೂಕು ಅಧ್ಯಕ್ಷ ಜಿ.ಕೊಟ್ರೇಶ್, ಕಾರ್ಯದರ್ಶಿ ಟಿ.ಎಚ್.ಎಂ.ಶೇಖರಯ್ಯ, ಉಪಾಧ್ಯಕ್ಷ ಎಚ್.ಜಿ.ಹನುಮಂತಪ್ಪ, ಸಂಘಟನಾ ಕಾರ್ಯದರ್ಶಿ ಎಚ್.ಗೋಣಿಬಸಪ್ಪ, ಮುಖ್ಯ ಶಿಕ್ಷಕ ಜಿ.ಜಗದೀಶ್, ಡಿಎಸ್ಎಸ್ ಮುಖಂಡರು ಹನುಮೇಶ, ಜಿ.ರಮೇಶ, ಜಿ.ಸಿದ್ದನ ಗೌಡ, ನಾಗಲಿಂಗಸ್ವಾಮಿ ಸೇರಿದಂತೆ ಶಿಕ್ಷಕರು ಸಾರ್ವಜನಿಕರು ವಿದ್ಯಾರ್ಥಿಗಳು ಇದ್ದರು.

ಕೋಟ್:

ವಿದ್ಯಾರ್ಥಿಗಳು ವಿಜ್ಞಾನಕ್ಕೆ ಆದ್ಯತೆ ನೀಡಿ, ದೇಶದ ಪ್ರಗತಿಗೆ ಸಂಶೋಧನೆ ನಡೆಸುವ ಮೂಲಕ ಮುಂದಿನ ಪೀಳಿಗೆಗೆ ದಾರಿಯಾಗುವ ವೈಜ್ಞಾನಿಕ ಮಾದರಿಗಳು ಬರಬೇಕು.   ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ತಂದು ಉನ್ನತಿ ಕರಿಸುವೆ.

-ಡಾ ಶ್ರೀನಿವಾಸ್ ಎನ್ ಟಿ, ಶಾಸಕ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ