ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ ಹಾಜರಾಗದ ಶಾಲಾ ಮುಖ್ಯಶಿಕ್ಷರನ್ನು : ಅಮಾನತ್ತು ಮಾಡುವಂತ ಆಗ್ರಹ

ಕೊಟ್ಟೂರು: ಇದೇ ತಿಂಗಳ ೨೧ ರಂದು ನಡೆದ ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ ಶಾಲಾ ಮುಖ್ಯಶಿಕ್ಷರು ಹಾಜರಾಗದೇ ನಿರ್ಲಕ್ಷ್ಯತೆ ತೋರಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೊಟ್ಟೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಸರ್ಕಾರಿ ಕಛೇರಿಗಳ ಮುಖ್ಯಶಿಕ್ಷರು ಕಡ್ಡಾಯವಾಗಿ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕೆಂದು ಸರ್ಕಾರ, ಸ್ಥಳೀಯ ಆಡಳಿತವಾದ ತಹಶೀಲ್ದಾರರು, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದ್ದರೂ ಸಹ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಸುಂಕದಕಲ್ಲು  ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋರನಹಳ್ಳಿಯ ಎರಡೂ ಶಾಲೆಗಳ ಮುಖ್ಯಗುರುಗಳು ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಗ್ಗೆ ಬಿಇಓ,ಸಿಆರ್ಪಿ ಅವರನ್ನು ಕೇಳಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ. ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ ಹಾಜರಾಗದೆ ಇರುವ ಎರಡೂ ಶಾಲೆಗಳ ಮುಖ್ಯಗುರುಗಳ ಅಮಾನತ್ತು ಮಾಡುವಂತೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಡಿ.ಎಸ್.ಎಸ್. ಮುಖಂಡ ಪ್ರವೀಣ್ , ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಪಿ ಚಂದ್ರಶೇಖರ್ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ