ಕೊಟ್ಟೂರು: ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಡವಾಗಲು ಕ್ರೀಡೆಗಳು ಸಹಕಾರಿ ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು. ತಾಲ್ಲೂಕಿನ ಕೋಗಳಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ಪಿಯು ಹಂತ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟವಾಗಿದ್ದು ಪಠ್ಯೇದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಭಾಗವಹಿಸುವಂತಹ ಮನೋಭಾವ ವಿದ್ಯಾರ್ಥಿಗಳಲ್ಲಿರಬೇಕು ಎಂದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಗ್ರಾ.ಪಂ.ಅಧ್ಯಕ್ಷೆ ರೇಣುಕಾ ಪಿ.ಸಮಾದೆಪ್ಪ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಗೌಡ್ರು ಬಸವರಾಜ್, ತಾಲ್ಲೂಕು ಅಧ್ಯಕ್ಷ ಜಗದೀಶ ಚಮದ್ರ ಭೋಸ್, ಪಿ.ಎ.ಸಿ.ಎಸ್. ಅಧ್ಯಕ್ಷ ಎನ್.ಹೇಮಗಿರಿಗೌಡ, ವಿ.ಎಸ್.ಎಸ್.ಎನ್. ಅಧ್ಯಕ್ಷ ಕೆ.ಚಂದ್ರಶೇಖರ್, ಪಿ.ಯು. ಕಾಲೇಜುಗಳ ಪ್ರಾಂಶುಪಾಲರಾದ ಜಿ.ಸೋಮಶೇಖರ್, ಎಂ.ಎಚ್. ಪ್ರಶಾಂತಕುಮಾರ್, ಕೆ.ಎಂ.ಜಯಣ್ಣ, ಬಿ.ಪಿ.ತಿಪ್ಪೇಸ್ವಾಮಿ, ನಿರ್ಮಲಶಿವನಗುತ್ತಿ, ಅನುಪಮ ಭೂಸನೂರಮಠ್, ಪವನ್ ಕುಮಾರ್, ಆರ್.ಮಧುಸೂಧನ್, ಪಿ.ಟಿ. ಸಂತೋಷ್ ಕುಮಾರ್, ರೇಣುಕಾ ಹೊಸಮನಿ, ಹಾಗೂ ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕರು ಮುಖಂ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ