ಜನಸಂಪರ್ಕ ಸಭೆ : ಸಮಸ್ಯೆ ಆಲಿಸಿದ ಶಾಸಕ ಬಸವನಗೌಡ ತುರುವಿಹಾಳ
ಮಸ್ಕಿ : ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನಡೆದ ಜನಸಂಪರ್ಕ ಸಭೆಗೆ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕರಾದ ಆರ್ ಬಸವನಗೌಡ ತುರುವಿಹಾಳ ಹಾಜರಾಗಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜೆಜೆಎಂ ಯೋಜನೆಯಲ್ಲಿ ನೆಡೆಯುತ್ತಿರುವ ಕಾಮಗಾರಿ ಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಾನು ರೈತರ ಮಗ. ಪ್ರತಿನಿತ್ಯ ರೈತರ ಸಂಪರ್ಕದಲ್ಲಿದ್ದೇನೆ. ರೈತರ ಋಣ ತೀರಿಸಲು ಮತ್ತು ಅವರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ,ತಹಶಿಲ್ದಾರರಾದ ಸುಧಾ ಅರಮನೆ,ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಮತ್ತು ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ,ಸೇರಿದಂತೆ ಕಾಂಗ್ರೆಸ್ ನ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಸಾರ್ವಜನಿಕ ಇದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ