ಬಿಜೆಪಿ ಮಂಡಲ ಅಧ್ಯಕ್ಷರಾಗಿ ಶರಣಬಸವರಾಜ ಆಯ್ಕೆ

ಮಸ್ಕಿ : ತಾಲೂಕ ಬಿಜೆಪಿ ಮಂಡಲದ ನೂತನ ತಾಲೂಕಾಧ್ಯಕ್ಷರನ್ನಾಗಿ ಮಸ್ಕಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿದ ‌ಶರಣಬಸವರಾಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಯಚೂರು ಜಿಲ್ಲಾಧ್ಯಕ್ಷ ಡಾ. ಶಿವರಾಜ್ ಪಾಟೀಲ್ ತಿಳಿಸಿದ್ದಾರೆ.

ಅವರ ಆಯ್ಕೆಗೆ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ರವರು ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ನೂತನ ಅಧ್ಯಕ್ಷ ಶರಣಬಸವರಾಜ ಸೊಪ್ಪಿಮಠ ರವರು ಪಕ್ಷದ ಹಿರಿಯರು, ಮಾಜಿ ಶಾಸಕರು,ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಭರವಸೆಯನ್ನಿಟ್ಟು ತಾಲೂಕಾ ಮಂಡಲ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನೀಡಿದ್ದಾರೆ.ಅದಕ್ಕೆ ಯಾವುದೇ ರೀತಿಯ ಕಪ್ಪು ಚುಕ್ಕೆ ಬಾರದಂತೆ ಕೊಟ್ಟ ಜವಾಬ್ದಾರಿಯನ್ನು ಮುನ್ನಡೆಸಿಕೊಂಡು ಹೋಗುತ್ತೇನೆ ಎಂದು ಪತ್ರಿಕೆಗೆ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*

" ಶ್ರೀ ಗುರು ಕೊಟ್ಟೂರೇಶ್ವರ ಕಾರ್ತಿಕೋತ್ಸವದಲ್ಲಿ ಜಿಲ್ಲಾಧಿಕಾರಿಗಳು ಭಕ್ತಿ ಸಮರ್ಪಣೆ "