ಹಮಾಲಿ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ
ಮಸ್ಕಿ: ದಿನವಿಡಿ ಮೈಮುರಿದು ದುಡಿಯುವ ಶ್ರಮಿಕ ವರ್ಗದ ಹಮಾಲರು ಕಾಯಕ ಮಾಡುವ ಮೂಲಕ ಸುಂದರವಾದ ಬದುಕು ಕಟ್ಟಿಕೊಳ್ಳಬೇಕೆಂದು ಹನುಮಂತಪ್ಪ ಮುದ್ದಾಪುರ ತಿಳಿಸಿದರು.
ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ಸಂಘದಿಂದ ಬುಧವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಮಾಲರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬುದ್ದ, ಬಸವ, ಏಸು, ಅಂಬೇಡ್ಕರ್, ಪೈಗಂಬರ್ ಇವರುಗಳು ಕಾಯಕಕ್ಕೆ ಹೆಚ್ಚಿನ ಒತ್ತು ಕೊಟ್ಟವರು. ಶರಣರ ಮಾರ್ಗದರ್ಶನದಂತೆ ಹಮಾಲರು ದುಡಿದು ತಿನ್ನಬೇಕು. ಯಾರಿಗೂ ಮೋಸ, ಅನ್ಯಾಯ ಮಾಡಬಾರದು. ಮತ್ತೊಬ್ಬರ ಮನಸ್ಸಿಗೆ ನೋವಾಗುವ ರೀತಿಯಲ್ಲಿನಡೆದುಕೊಳ್ಳಬಾರದೆಂದು ಹಮಾಲರಿಗೆ ಕಿವಿಮಾತು ಹೇಳಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಎಂದು ಹಮಾಲರಿಗೆ ಕರೆ ನೀಡಿದರು.
ನಂತರ ಮಾತನಾಡಿದ ದೇವರಾಜ್ ಮಡಿವಾಳರ ಈಗಾಗಲೇ 350 ಮಂದಿ ಅರ್ಹ ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಹಮಾಲಿ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು. ಈ ಮೂಲಕ ಹಮಾಲಿ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಂಗಪ್ಪ ತೋರಣದಿನ್ನಿ , ಚಾಂದ್ ಸಾಬ್, ದೇವರಾಜ ಮಡಿವಾಳರ,ಹನುಮಂತ ದೀನಸಮುದ್ರ,ಬಸವರಾಜ,ರಾಮಣ್ಣ ಹಾಗೂ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ