ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಬೆಳೆಯಬೇಕು : ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿಗಳು ಕೆ ರೇಣುಕಮ್ಮ
ಕೊಟ್ಟೂರು ತಾಲೂಕಿನ ಕೆ ಗಜಾಪುರ ಗ್ರಾಮದಲ್ಲಿ ಶುಕ್ರವಾರ ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿಗಳು ಕೆ ರೇಣುಕಮ್ಮ, ಮಾತನಾಡಿ ಅಂತರರಾಷ್ಟ್ರೀಯ ಮಹಿಳಾ ದಿನದ ಮಹತ್ವ
ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗುರುತಿಸಲು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.
21ನೇ ಶತಮಾನದ ಅತಿದೊಡ್ಡ ಜಾಗತಿಕ ಸವಾಲುಗಳಲ್ಲಿ ಒಂದಾಗಿದೆ. ಪುರುಷರಿಗಿಂತ ಮಹಿಳೆಯರನ್ನು ಹೆಚ್ಚು ದುರ್ಬಲರಂತೆ ಕಾಣಲಾಗುತ್ತಿದೆ. ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಾರೆ. ಮಹಿಳೆಯರು ಮತ್ತು ಯುವತಿಯರು ಹೆಚ್ಚು ಪ್ರಭಾವಶಾಲಿ, ಶಕ್ತಿಯುತ ನಾಯಕಿಯರಾಗಿದ್ದಾರೆ.
ವಿಶ್ವದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಸಾರ್ವಜನಿಕ ಭಾಷಣ, ರ್‍ಯಾಲಿ, ಕಾರ್ಯಾಗಾರ ಮತ್ತು ವಿಚಾರಗೋಷ್ಠಿ, ಚರ್ಚೆಗಳು, ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸಗಳನ್ನು ನಡೆಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ.ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು,ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾರದಮ್ಮ ಗ್ರಾಮ ಪಂಚಾಯಿತಿ ಸದಸ್ಯರು ಎಚ್ ನಾಗರತ್ನಮ್ಮ, ಮುಖ್ಯ ಗುರುಗಳಾದ ಎಚ್ ಅಂಜಿನಪ್ಪ ಶಿಕ್ಷಕರು, ಗುರು ಸರ್ ,ಸವಿತಾ ವಿ,ಎ ಬಸಮ್ಮ ಗ್ರಾಮ ಲೆಕ್ಕಾಧಿಕಾರಿಗಳು, ಚೇತನ ಮೇಡಂ ಅವರು, ಚಂದ್ರಪ್ಪ ಸರ್, ಶಾಲಿನಿ ಮೇಡಂ, ರೇಖಾ ಮೇಡಂ, ಸವಿತಾ ಮೇಡಂ,ವಿ ಹನುಮಂತ .
ನಿರೂಪಣೆ ಕೆ.ಅನಿತ, ಅಕ್ಷತಾ ಇವರೆಲ್ಲರೂ ಸೇರಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ