ಸಿದ್ದಾಪುರ ಗ್ರಾಮದ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ಸೋಮನಾಥ ನಾಯಕ
ವರದಿ - ಮಂಜುನಾಥ್ ಕೋಳೂರು, ಕೊಪ್ಪಳ
ಕೊಪ್ಪಳ : - ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ತಾಲೂಕಾ ಪಂಚಾಯತ ಐಇಸಿ ಸಂಯೋಜಕ ಸೋಮನಾಥ ನಾಯಕ ಅವರು ಹೇಳಿದರು.
ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ನರೇಗಾ ಕೂಲಿಕಾರರಿಗೆ ಗ್ರಾಮದ ರೈತರ ಹೊಲದಲ್ಲಿ ನಾಲಾ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅತ್ಯಅಮೂಲ್ಯವಾದ್ದು, ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ. ಮತದಾರರು ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ನಿಮ್ಮ ಮತದಾನ ಹಕ್ಕು ಚಲಾಯಿಸಿ ಶೇ.100 ರಷ್ಟು ಮತದಾನದ ಪ್ರಗತಿ ಸಾಧಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು. ನಂತರ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
*ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ:* ಏಪ್ರಿಲ್ 1 ರಿಂದ ಮೇ ಅಂತ್ಯದವರೆಗೆ ನರೇಗಾ ಯೋಜನೆಯಡಿ ಮಹಿಳೆಯರು, ವಿಶೇಷ ಚೇತನರು, ಲಿಂಗತ್ವ ಅಲ್ಪ ಸಂಖ್ಯಾತರು, ದುರ್ಬಲವರ್ಗದ ಕುಟುಂಬದವರು ಹಾಗೂ ಎಲ್ಲಾ ನೊಂದಾಯಿತ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಲಾಗುವುದು. ದಯವಿಟ್ಟು ಯಾರು ವಲಸೆ ಹೋಗಬಾರದು ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಕೆಲಸ ನೀಡಲಾಗುತ್ತಿದ್ದು, ಗ್ರಾ.ಪಂ ನಮೂನೆ- 6 ಸಲ್ಲಿಸಿ ಯೋಜನೆಯ ಸದುಪಯೋಗ ಪಡೆಯಿರಿ ಎಂದರು.
ಈ ಸಂದರ್ಭಗಳಲ್ಲಿ ತಾಂತ್ರಿಕ ಸಹಾಯಕ ರಾಜೀವ್ ಭಾವಿ, ಬಿಎಫ್ಟಿಗಳಾದ ಬಸವರಾಜ್, ಅನಿಲ್ ಕುಮಾರ್, ಗ್ರಾಮ ಪಂಚಾಯತಿ ಸಿಬ್ಬಂದಿ ಯಶವಂತ್, ಮಂಜುನಾಥ ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ