ಬಪ್ಪೂರು ಗ್ರಾಮ ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ

ಮಸ್ಕಿ: ಕಳೆದ ಎರಡುವರೆ ವರ್ಷ ಕಾಂಗ್ರೆಸ್ ಹಿಡಿತದಲ್ಲಿದ್ದ ತಾಲೂಕಿನ ಬಾಪ್ಪೂರ್ ಗ್ರಾಮ ಪಂಚಾಯತಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಹೋಗಿದೆ. ಶನಿವಾರ 2ನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ರೇಣುಕಮ್ಮ ಹಂಪನಾಳ ಅಧ್ಯಕ್ಷರಾಗಿ ಮತ್ತು ಪದ್ದಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾದರು.

19 ಸದಸ್ಯ ಬಲದ ಬಪ್ಪುರ್ ಗ್ರಾಮ ಪಂಚಾಯತಿಯಲ್ಲಿ 10 ಕಾಂಗ್ರೆಸ್ ಮತ್ತು 09 ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು ಹೀಗಾಗಿ ಒಂದು ಮತಗಳ ಅಂತರದಿಂದ ಕಾಂಗ್ರೆಸ್ ಗುಂಪು ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು.

 ತಾಲೂಕು ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆ ಅಧಿಕಾರಿ ಶಿವಾನಂದ ರೆಡ್ಡಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಬಳಿಕ ನೂತನ ಅಧ್ಯಕ್ಷ ರೇಣುಕಮ್ಮ ಹಂಪನಾಳ ಮಾತನಾಡಿ, ಎಲ್ಲ ಮುಖಂಡರು ಸಹಕಾರದಿಂದ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ಗ್ರಾಮದ ಜನರ ಸಹಕಾರ ಮತ್ತು ಬಪ್ಪೂರು ಎಲ್ಲ ಸದಸ್ಯರ ಸಹಕಾರದಿಂದ ಅಧಿಕಾರ ಪಡೆಯಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾದರಿ ಗ್ರಾಮ ಪಂಚಾಯತಿಯಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಾಗಿದೆ ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ