ಕಳಪೆ ಮಟ್ಟದ ರಸ್ತೆ ಕಾಮಗಾರಿ ತನಿಖೆಗೆ ಬಾಲಸ್ವಾಮಿ ಜಿನ್ನಾಪುರ್ ಆಗ್ರಹ

ಮಸ್ಕಿ: ತಾಲೂಕಿನ ಬಳಗಾನೂರು ಹೋಬಳಿಯ,ನಾಗರೆಡ್ಡಿ ಕ್ಯಾಂಪ್ ನಿಂದ ಜವಳಗೇರಾ ಸಂಪರ್ಕ ಕಲ್ಪಿಸುವ ರಸ್ತೆವರಗೆ ತುಂಗಭದ್ರಾ ಅಚ್ಚು ಕಟ್ಟು ಪ್ರದೇಶ ಕಾಡ ಯೋಜನೆಯಡಿಯಲ್ಲಿ 17 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 1.75ಕಿ.ಮಿ. ಮೆಟ್ಲಿಂಗ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು ಕೂಡಲೇ ಸಂಬಂಧಿತ ಅಧಿಕಾರಿಗಳು ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಬಾಲಸ್ವಾಮಿ ಜಿನ್ನಾಪೂರ ರವರು ತುಂಗಾಭದ್ರ ಕಾಡಾ ಇಲಾಖೆ ಅಧಿಕಾರಿಗಳಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸರಕಾರದಿಂದ ಕೈಗೊಂಡ ಮೆಟ್ಲಿಂಗ್ ರಸ್ತೆ ನಿರ್ಮಾಣ ಹಂತದಲ್ಲೇ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ. ರಸ್ತೆಗೆ ಮಣ್ಣು, ಒಂದಿಷ್ಟು ಜಲ್ಲಿ ಕಲ್ಲು ಹಾಕಿ ರಸ್ತೆ ಕೆಲಸ ನಡೆಯುತ್ತಿದೆ.ಕಳಪೆ ಮಟ್ಟದ ಮರಮ ಹಾಕಿ ಕೆಲಸ ನಿರ್ವಹಿಸಿದ್ದಾರೆ. ಕಾಮಗಾರಿ ಪ್ರಾರಂಭಕ್ಕೂ ಮುನ್ನ ನಾಮಫಲಕ ಹಾಕದೆ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ, ರಸ್ತೆಗೆ ಮರಮ ಗುಣಮಟ್ಟದ್ದು ತಪಾಸಣೆ ಮಾಡದೆ ಗುತ್ತೇದಾರ ತನ್ನ ಮನಸ್ಸು ಇಚ್ಛೆಯಂತೆ ಕೆಲಸ ನಿರ್ವಹಿಸುತ್ತಿದ್ದಾನೆ. ಈ ಕುರಿತು ಸಂಬಂಧಿತ ಗುತ್ತಿಗೆದಾರರ ಗಮನಕ್ಕೆ ತಂದರೂ ಗುಣಮಟ್ಟದ ಕಾಮಗಾರಿ ಕೈಗೊಳ್ಳುತ್ತಿಲ್ಲ. ಹಾಗೂ 

ಕೂಡಲೇ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಾಮಗಾರಿ ಪರಿಶೀಲಿಸಿ ಸಂಬಂಧ ಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಂಡು ಕಾಮಗಾರಿಯ ಬಿಲ್ಲನ್ನು ತಡೆಹಿಡಿಬೇಕು, ಮತ್ತು ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ ಬೀದಿಗಿಳಿದು ನಮ್ಮ ಸಂಘಟನೆಯಿಂದ ತಮ್ಮ ಇಲಾಖೆಯ ಮುಂದೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ