ಕಾಂಗ್ರೆಸ್‌ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಹೇಮಲತಾ ನಾಯಕ

 ವರದಿ - ಮಂಜುನಾಥ ಕೋಳೂರು ಕೊಪ್ಪಳ 

ಕೊಪ್ಪಳ : -- ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ವೈಫಲ್ಯ ದಿಂದ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ್ ಹೇಳಿದರು.

ಅವರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ, ಉದ್ದೇಶಿಸಿ ಮಾತನಾಡಿ ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಜರಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಸರಕಾರ ಬೊಕ್ಕಸವನ್ನು ಬರಿದಾಗಿಸಿ ಆಡಳಿತ ವ್ಯವಸ್ಥೆಯಲ್ಲಿ ವೈಫಲ್ಯ ಕಂಡ ಪರಿಣಾಮವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿ, ರಾಷ್ಟ್ರ ವಿರೋಧಿ ಮಾನಸಿಕತೆ ಹಾಗೂ ಆಡಳಿತ ವೈಫಲ್ಯಗಳ ವಿಸ್ತ್ರತ ಮಾಹಿತಿ.

ಇಡೀ ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಬರಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಅತ್ಮಹತ್ಯೆ ಮಾಡಿಕೊಂಡಿದ್ದು, ಜನರು ಗುಳೆ ಹೋಗುತ್ತಿದ್ದಾರೆ. ಆದರೆ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ ಎಂದರು.

 ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಕುಮಾರ್ ಗುಳಗಣ್ಣನವರ ಮಾತನಾಡಿ ಸರಕಾರ ಕೊಡುವ ಪರಿಹಾರ ಮೊತ್ತದ ಆಸೆಗಾಗಿ ರೈತರ ಆತ್ಮಹತ್ಯೆಗಳಾಗುತ್ತಿವೆ ಎಂದು ರಾಜ್ಯದ ಸಚಿವರಾದ ಶಿವನಾಂದ ಪಾಟೀಲ್ ಹೇಳುತ್ತಾರೆ. ಇದು 'ರೈತವಿರೋಧಿ' ಹೇಳಿಕೆಯಲ್ಲವೇ?

ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುತ್ತಾ ಬಂದಿದೆ ಸರ್ಕಾರ. ಟ್ಯಾಂಕರ್ ನೀರಿನ ಮಾಫಿಯಾಗಳಿಗೆ ಜತೆಯಾಗಿ ನೀರಿನ ದರ ದುಪ್ಪಟ್ಟು ಮಾಡಿದೆ. ಕೈಗಾರಿಕಾ ಪ್ರದೇಶಗಳಿಗೆ ನೀರನ್ನು ಸರಬರಾಜು ಮಾಡದೇ ಉದ್ಯಮಗಳು ಬಾಗಿಲು ಮುಚ್ಚಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್ ಜನರ ಬದುಕನ್ನು ನರಕ ಮಾಡುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ವಕ್ತಾರಾದ ಮಹೇಶ್ ಹಾದಿಮನಿ,ಅಮಿತ್ ಕಂಪ್ಲಿ ಕರ್ ,ಪಕ್ಷದ ಮುಖಂಡರಾದ ಸೋಮಶೇಖರ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ