ಬೈಕಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಮಸ್ಕಿ : ಸಿಂಧನೂರಿನಿಂದ ಮುದಗಲ್ ಗೆ ಮದುವೆಗೆ ಎಂದು ತೆರಳುತ್ತಿದ್ದ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಸ್ಕಿ ಪಟ್ಟಣದ ಅಶೋಕ ಶಿಲಾ ಶಾಸನ ರಸ್ತೆ ಬಳಿ ಈ ಘಟನೆ ನಡೆದಿದೆ.

ಲಾರಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಸ್ಕಿಯ ಅಶೋಕ ಶಿಲಾ ಶಾಸನ ರಸ್ತೆ ಬಳಿ ಈ ಘಟನೆ ಸಂಭವಿಸಿದೆ. ಸಿಂಧನೂರು ಮೂಲದ ಸಮೀರ್ (22) ಸಲ್ಮಾ (10) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಸಿಂಧನೂರಿನಿಂದ ಸವಾರರು ಮದುವೆಗೆ ಮುದಗಲ್ ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದ್ದು, ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*