ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರು ಮೇಲೆ ಹಲ್ಲೆ ಖಂಡನಾರ್ಹ : ದೇವರಾಜ್ ಮಡಿವಾಳರ

ಮಸ್ಕಿ:ಹಿರಿಯ ಸಂಸ್ಕೃತಿ ಚಿಂತಕರು, ಸಾಹಿತಿಗಳು ,ರಂಗಕರ್ಮಿಗಳು ,ಹೋರಾಟಗಾರರು ಆದ ಒಡನಾಡಿ ಶ್ರೀ ಕೋಟಿಗಾನಹಳ್ಳಿ ರಾಮಯ್ಯ ರವರ ಮೇಲೆ ಹಲ್ಲೆ ಅಘಾತಕಾರಿ ಹಾಗೂ ಸಿಪಿಐಎಂಎಲ್ ಲಿಬರೇಶನ್ ಬಲವಾಗಿ ಖಂಡಿಸುತ್ತದೆ ಎಂದು ಸಿಪಿಐಎಂಎಲ್ ಲಿಬರೇಶನ ರಾಯಚೂರು ಜಿಲ್ಲಾ ಸಮಿತಿ ಸದಸ್ಯ ದೇವರಾಜ್ ಮಡಿವಾಳರ  ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.


ಕೋಲಾರ ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪ ರಾಜನಹಳ್ಳಿ ಗ್ರಾಮದಲ್ಲಿ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಅವರ ಪುತ್ರ ಮೇಲೆ ಗ್ರಾಮದ ದೇವಸ್ಥಾನದಲ್ಲಿ ಧ್ವನಿವರ್ಧಕ ಸೌಂಡ್ ವಿಚಾರದಲ್ಲಿ ಹಲ್ಲೆ ನಡೆದಿದೆ.ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಸಿಪಿಐಎಂಎಲ್ ಲಿಬರೇಶನ್  ಆಗ್ರಹಿಸುತ್ತದೆ ಹಾಗೂ ಈ ಕೂಡಲೇ ಸರ್ಕಾರ ಗಂಭೀರವಾಗಿ ಪರಿಗಣಿಸಿ ರಾಮಯ್ಯ ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕೆಂದು ಸಿಪಿಐಎಂಎಲ್ ಲಿಬರೇಶನ ರಾಯಚೂರು ಜಿಲ್ಲಾ ಸಮಿತಿ ಸದಸ್ಯ ದೇವರಾಜ್ ಮಡಿವಾಳರ  ಪತ್ರಿಕೆ ಹೇಳಿಕೆ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ