ಐತಿಹಾಸಿಕ ಮಸ್ಕಿ ಮುದ್ದು ಮಲ್ಲಿಕಾರ್ಜುನ ಜಾತ್ರಾಮಹೋತ್ಸವ.

ಮಸ್ಕಿ: ಐತಿಹಾಸಿಕ ಮಸ್ಕಿ ಮುದ್ದು ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಇಂದು ದವನದ ಹುಣ್ಣಿಮೆ ದಿನ ನಡೆಯಲಿದೆ ಎಂದು ಮಲ್ಲಿಕಾರ್ಜುನ ದೇವಸ್ಥಾನದ ಅರ್ಚಕರಾದ ಸಿದ್ದಯ್ಯ ಹಿರೇಮಠ ರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ ಪಟ್ಟಣದ ಮುದಗಲ್ ರಸ್ತೆಯಲ್ಲಿರುವ ಮುದ್ದು ಮಲ್ಲಿಕಾರ್ಜುನ ದೇವ ಸ್ಥಾನದಲ್ಲಿ ರುದ್ರಾಭಿಷೇಕ, ಕಳಸ ಪೂಜೆ, ವಿಶೇಷ ಪೂಜೆ ಹಾಗೂ ರಥಕ್ಕೆ ಕಳಸಾಭಿಷೇಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6 ಗಂಟೆಗೆ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವ ಜರುಗಲಿದೆ.

ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಗಚ್ಚಿನಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ವಹಿಸುವರು ಎಂದು ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*