ಮಸ್ಕಿ : ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಸಹಾಯಕ ಚುನಾವಣಾಧಿಕಾರಿಗಳಿಂದ ಧ್ವಜಾರೋಹಣ

ಮಸ್ಕಿ : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಭಾನುವಾರ ಮಸ್ಕಿ ಪುರಸಭೆ ಆವರಣದಲ್ಲಿ ಏರ್ಪಡಿಸಿದ್ದ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿಗಳಾದ ಜಗದೀಶ್‌ ಗಂಗಣ್ಣನವರ ಧ್ವಜಾರೋಹಣ ನೆರವೇರಿಸಿದರು. 

ನಂತರ ಮಾತನಾಡಿ, ಸ್ಥಳೀಯ ಬೂತ್‌ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿರುವ ಕುರಿತು ಮತದಾರರು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಡಿ ಧ್ವಜಾರೋಹಣ ನೆರವೇರಿಸಲಾಗಿದೆ. ಸ್ಥಳೀಯರಿಗೆ ಮತದಾನದ ಮಹತ್ವ ತಿಳಿಸಿ, ಮತಗಟ್ಟೆಗೆ ಆಗಮಿಸುವಂತೆ ಪ್ರೇರಣೆ ನೀಡಲಾಗುವುದು. ಇಂದಿನಿಂದ ಮೇ 7 ರವರೆಗೆ ಧ್ವಜ ಹಾರಾಡಲಿದೆ ಎಂದರು.

ಮಸ್ಕಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಅಂಬರೀಶ್‌, ಮಾತನಾಡಿ, ಮಸ್ಕಿ ಕ್ಷೇತ್ರದ 231 ಬೂತ್‌ಗಳಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಸ್ಥಳೀಯರು ಬಿಎಲ್‌ಒಗಳಿಗೆ ಸಹಕಾರ ನೀಡಿ, ಶೇಕಡವಾರು ಮತದಾನ ಪ್ರಮಾಣ ಹೆಚ್ಚಳಕ್ಕೆ ಕಾಳಜಿ ವಹಿಸಬೇಕು ಎಂದರು.

ಈ ವೇಳೆ ತಾ.ಪಂ ಸಿಬ್ಬಂದಿ ಗಂಗಾಧರ ಮೂರ್ತಿ, ಚಂದ್ರಶೇಖರ್‌, ಪುರಸಭೆ ಸಿಬ್ಬಂದಿ ಶಿವಣ್ಣ, ಮೀನಾಕ್ಷಮ್ಮ, ಸೋಮನಾಥ, ಗದ್ದೆಪ್ಪ, ಸುನೀಲ್‌, ಜಿ.ನಾಗರಾಜ್‌, ಬಸವರಾಜ್‌, ಅಂಬಿಕಾ, ಅಂಗನವಾಡಿ ಮೇಲ್ವಿಚಾರಕಿ ಶಿವಲೀಲಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ