ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸಲು, ಸಾಮೂಹಿಕ ಸಂಘಟನೆಗಳಿಂದ ಕೊಟ್ಟೂರು ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ ಮನವಿ

ಕೊಟ್ಟೂರು: ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಕೃತ್ಯಗಳನ್ನು ಬಯಲಿಗೆಳೆದು, ವರದಿ ಮಾಡಿ ಸಮಾಜವನ್ನು ಎಚ್ಚರಗೊಳಿಸುತ್ತಿರುವ ಪತ್ರಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಹಾಗೂ ಪತ್ರಕರ್ತರಿಗೆ ಜೀವ ಬೆದರಿಕೆ ಇದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗುರುವಾರ ಸಾಮೂಹಿಕ ಸಂಘಟನೆಗಳ ಪದಾಧಿಕಾರಿಗಳು ಪೊಲೀಸ್ ಉಪ ಆರಕ್ಷಕರಿಗೆ ಮನವಿ ಸಲ್ಲಿಸಿದರು. 

ಕೊಟ್ಟೂರಿನಲ್ಲಿ ಇತ್ತೀಚೆಗೆ ದೋ ನಂಬರ್ ವ್ಯವಹಾರ, ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್ ಆಡುವವರ ಸಂಖ್ಯೆ ವಿಪರೀತವಾಗಿ ಹೆಚ್ಚಾಗಿದ್ದು, ಈ ಬಗ್ಗೆ ದಾಖಲೆಗಳ ಸಮೇತ ಪತ್ರಿಕೆಯಲ್ಲಿ ಕೊಟ್ಟೂರು ಪತ್ರಕರ್ತರು ಯಾವುದೇ ಮುಲಾಜಿಲ್ಲದೇ, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ವಸ್ತುನಿಷ್ಠವಾಗಿ ವರದಿ ಮಾಡಿ, ತಪ್ಪಿತಸ್ಥರನ್ನು ಬಯಲಿಗೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವವರು ತಮ್ಮ ಹೆಸರನ್ನು ಬಹಿರಂಗಗೊಳಿಸಿ ನಮಗೆ ಕುತ್ತು ತರುತ್ತಿದ್ದಾರೆ ಎಂಬ ಭೀತಿಯಿಂದ ಪತ್ರಕರ್ತರ ಮೇಲೆ ಸುಖಾಸುಮ್ಮನೆ ಸುಳ್ಳು ಆರೋಪಗಳನ್ನು ಹೊರಿಸಿ ಜೀವ ಬೆದರಿಕೆ ಒಡ್ಡುವ ಎಲ್ಲಾ ಲಕ್ಷಣಗಳು ಕಂಡುಬಂದಿವೆ. ಆದ್ದರಿಂದ ಪತ್ರಕರ್ತರಿಗೆ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ಹಾಗೂ ಇಂತಹ ಸುಳ್ಳು ಆರೋಪಗಳನ್ನು ಹೊರಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಟ್ಟೂರು ಸಿಪಿಐ ಅವರಿಗೆ ಮನವಿಯಲ್ಲಿ ತಿಳಿಸಲಾಗಿದೆ ಮತ್ತು ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿ ಕೆ ರೇಣುಕಮ್ಮ, ಡಿಎಸ್ಎಸ್ ತಾಲೂಕ ಅಧ್ಯಕ್ಷ ಪಿ ಚಂದ್ರಶೇಖರ್, ಸಿಪಿಎಂಎಲ್ ಲಿಬ್ರೇಶನ್ ಪಕ್ಷದ ತಾಲೂಕು ಕಾರ್ಯದರ್ಶಿ ಜಿ ಮಲ್ಲಿಕಾರ್ಜುನ್ಆ, ಮುಸ್ಲಿಂ ಸಂಘದ ಅಧ್ಯಕ್ಷ ನೂರ್ , ತಿಮ್ಮಣ್ಣ ,ರಾಜುಗೌಡ, ಪ್ರಮುಖ ಮುಖಂಡರು ಆಗ್ರಹಿಸಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ