ಮತದಾನ ಹಬ್ಬದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಅಮರೇಶ್ ಕಾರ್ಯದರ್ಶಿ /ಗಮನ ಸೆಳೆದ ಜಾಗೃತಿ ಜಾಥಾ

ಮಸ್ಕಿ : ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಅಮರೇಶ್ ಕಾರ್ಯದರ್ಶಿ ಸಲಹೆ ನೀಡಿದರು.

ಮೆದಿಕಿನಾಳ ಗ್ರಾಮದ ಪಂಚಾಯತ್ ಕಟ್ಟೆಯಿಂದ ಪ್ರಾರಂಭವಾಗಿ ಅಗಸಿಯ ಬಸವೇಶ್ವರ, ಎಸ್ಸಿ ಕಾಲೋನಿಯ ಮಾರಿಯಮ್ಮನ ದೇವಸ್ಥಾನ,ದೈವದ ಕಟ್ಟೆ, ಬಸ್ ನಿಲ್ದಾಣ, ಸರಕಾರಿ ಆಸ್ಪತ್ರೆ,

ಬುಧವಾರ ಗ್ರಾಮ ಪಂಚಾಯತಿ ಮಟ್ಟದ ಸ್ವೀಪ್‌ ಸಮಿತಿ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಂವಿಧಾನದತ್ತವಾಗಿರುವ ಮತದಾನ ಹಕ್ಕನ್ನು ಯಾವುದೇ ಆಮಿಷಕ್ಕೆ ಒಳಗಾಗದೇ ತಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ ಚಲಾಯಿಸಬೇಕು. ಅಕ್ಷರಸ್ಥರು ತಮ್ಮ ಮನೆಯ ಸುತ್ತಲಿನ ನಿವಾಸಿಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಿ, ಅವರನ್ನು ಮತಗಟ್ಟೆಗೆ ಕರೆದುಕೊಂಡು ಹೋಗಬೇಕು. ಪ್ರತಿಯೊಬ್ಬರು ವಿಶೇಷ ಕಾಳಜಿ ವಹಿಸಿದಾಗ ಮಾತ್ರ ಮಸ್ಕಿ ಕ್ಷೇತ್ರದ ಶೇಕಡವಾರು ಮತದಾನ ಪ್ರಮಾಣ ಹೆಚ್ಚಳವಾಗಲಿದೆ ಎಂದರು.

ವೀರೇಶ ಮಾತನಾಡಿ ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಿ ಎಂದರು.ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಮತದಾನ ಜಾಗೃತಿ ಜಾಥಾ ಬ್ಯಾನರ್ ಹಿಡಿದು ಮತದಾನದ ಮಹತ್ವವನ್ನು ಘೋಷಣೆ ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆದವು.

ಇದೇ ಸಂದರ್ಭದಲ್ಲಿ ವೀರೇಶ ಹಾಗೂ ದುರುಗೇಶ್ ಕರ ವಸೂಲಿಗಾರರು, ಲಾಲ್ ಸಾಬ್,ಗ್ರಾಮ ಪಂಚಾಯತಿ ಸಿಬ್ಬಂದಿ ಸೇರಿದಂತೆ ಗ್ರಂಥ ಪಾಲಕರು,ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮಸ್ಥರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ