ನರೇಗಾ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ದಿನಾಚರಣೆ• ನರೇಗಾ ಕೂಲಿಕಾರರಿಗೆ ಮತದಾನದ ಬಗ್ಗೆ ಜಾಗೃತಿ

ಕೊಟ್ಟೂರು : ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೈ.ರವಿಕುಮಾರ್ ಅವರ ಮಾರ್ಗದರ್ಶನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಸಾಮೂಹಿಕ ಕಾಮಗಾರಿ ಸ್ಥಳಗಳಲ್ಲಿ ಬುಧವಾರ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು.

ತಾಲೂಕಿನ ತೂಲಹಳ್ಳಿ, ಉಜ್ಜಿನಿ ಗ್ರಾಮ ಪಂಚಾಯಿತಿಗಳಿಂದ ಉಜ್ಜಿನಿ ಕೆರೆಯಲ್ಲಿ ನೀಡಲಾಗಿರುವ ಸಾಮೂಹಿಕ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಗಟಗೇರಿ ಗ್ರಾಮದಲ್ಲಿ ಕೈಗೊಂಡಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಕೂಲಿಕಾರರೊಂದಿಗೆ ಕಾರ್ಮಿಕರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಹಾಗೆಯೇ ಕೋಗಳಿ, ನಿಂಬಳಗೇರಿ ಸೇರಿದಂತೆ 14 ಗ್ರಾಪಂಗಳ ನರೇಗಾ ಕಾಮಗಾರಿ ಸ್ಥಳದಲ್ಲಿಯೂ ಕೇಕ್ ಕತ್ತರಿಸುವ ಮೂಲಕ ಕಾರ್ಮಿಕರ ದಿನ ಆಚರಿಸಲಾಯಿತು. 

*ಏಕೀಕೃತ ಸಹಾಯವಾಣಿ ಬಗ್ಗೆ ಮಾಹಿತಿ*

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ವಿವಿಧ ಸೌಲಭ್ಯ ಹಾಗೂ ಕುಂದು-ಕೊರತೆಗಳನ್ನು ಸಾರ್ವಜನಿಕರು ತಿಳಿಸಲು ಏಕೀಕೃತ ಸಹಾಯವಾಣಿ ಸಂಖ್ಯೆ ಆರಂಭಿಸಿದ್ದು, ಕುಂದು ಕೊರತೆ, ನರೇಗಾ ಬಗ್ಗೆ ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆ 8277506000 ಬಗ್ಗೆ ಮಾಹಿತಿ ನೀಡಲಾಯಿತು.

*ಮತದಾನದ ಬಗ್ಗೆ ಜಾಗೃತಿ : 

ತಾಲೂಕಿನ 14 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ನರೇಗಾ ಸಾಮೂಹಿಕ ಕಾಮಗಾರಿ ಸ್ಥಳಗಳಲ್ಲಿ ಮೇ.7 ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಬಗ್ಗೆ ಮತದಾನ ಜಾಗೃತಿ ಮೂಡಿಸಲಾಯಿತು. ಮತದಾನ ದಿನದಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. 

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಬಿಎಫ್ ಟಿ, ಜಿಕೆಎಂ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ