ಮಾಜಿ ಸಚಿವ ಎಚ್.ಆಂಜನೇಯರಿಗೆ ಪರಿಷತ್ ಸ್ಥಾನ ಸಿಗಲಿ : ಸಿದ್ದು ಮುರಾರಿ

ಮಸ್ಕಿ : ವಿಧಾನ ಸಭೆಯಿಂದ ವಿಧಾನ ಪರಿಷತ್ ಅವಧಿ ಜೂನ್ 17ರಂದು 11 ವಿಧಾನ ಪರಿಷತ್ ಸದಸ್ಯರು ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಶೋಷಿತ ಸಮುದಾಯದ ಧ್ವನಿಯಾಗಿರುವ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕು' ಎಂದು ಮಾದಿಗ ಸಮುದಾಯದ ಯುವ ಮುಖಂಡ ಸಿದ್ದು ಮುರಾರಿ ಯವರು ಮನವಿ ಮಾಡಿದರು.

ಇದೇ ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಪಟ್ಟಣದಲ್ಲಿ ಪತ್ರಿಕೆಯ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

"ಎಚ್.ಆಂಜನೇಯ ಸಚಿವರಾಗಿದ್ದ ಅವಧಿಯಲ್ಲಿ ಮಾಜಿ ದೇವದಾಸಿಯರಿಗೆ ಮಾಸಾಶನ, ಅವರ ಮಕ್ಕಳ ಮದುವೆಗೆ ಪ್ರೋತ್ಸಾಹ ಧನ, ಹೆಚ್ಚಿನ ವಿದ್ಯಾಭ್ಯಾಸ ಮಾಡಲು ವಿದೇಶಕ್ಕೆ ಹೋಗಲು ಪ್ರೋತ್ಸಾಹ ಧನ ಸೇರಿ ಅನೇಕ ಐತಿಹಾಸಿಕ ಯೋಜನೆ ಜಾರಿಗೆ ತಂದಿದ್ದಾರೆ ".

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು ಪ್ರತಿ ಗ್ರಾಮಗಳಲ್ಲಿ ಸಮುದಾಯ ಭವನಗಳ ನಿರ್ಮಾಣ, ಅಭಿವೃದ್ಧಿ ನಿಗಮಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ್ ಅವರು ಆಂಜನೇಯ ಅವರನ್ನು ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಸಿದ್ದು ಮುರಾರಿ ದಲಿತ ಮುಖಂಡರು ಪತ್ರಿಕೆ ಹೇಳಿಕೆ ಮೂಲಕ ಒತ್ತಾಯಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ