ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ : ಆನಂದ ವೀರಾಪುರ

ಮಸ್ಕಿ : ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್ ಅವರಿಗೆ ಬೆಂಬಲಿಸುವಂತೆ ಕಾಂಗ್ರೆಸ್ ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಆನಂದ ವೀರಾಪುರ ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಕಳೆದ ಬಾರಿ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಚಂದ್ರಶೇಖರ ಅವರು, ಕಳೆದ ಐದು ವರ್ಷದಿಂದ ಈ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಬಾರಿಯೂ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖ ಪಾಟೀಲ್ ಅವರನ್ನು ಆಯ್ಕೆ ಮಾಡಲು ಮತದಾರರು ನಿರ್ಧಾರ ಮಾಡಿದ್ದಾರೆ ಎಂದರು.

2024 ನೇ ಸಾಲಿನ ಜೂನ್ 03 ರಂದು ನಡೆಯಲಿರುವ ಈ ಚುನಾವಣೆಯಲ್ಲಿ ಮಸ್ಕಿ ತಾಲೂಕಿನ( 1523 ) ಜನ ಮತದಾರರು ಈ ಬಾರಿ ಮತದಾನ ಮಾಡಲಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿರುದ್ಯೋಗಿಗಳಿಗೆ ತಲುಪಿದೆ. ಅಲ್ಲದೇ ಪಕ್ಷದ ಕಾರ್ಯಕರ್ತರೊಂದಿಗೆ ಮತದಾರರಿಗೆ ಕಾಂಗ್ರೆಸ್ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸಿ ಮತಯಾಚನೆ ಮಾಡಲಾಗುತ್ತದೆ ಎಂದರು.

ನಿರುದ್ಯೋಗಿ ಪದವೀಧರರು ಅತಿಥಿ ಉಪನ್ಯಾಸಕರ ಸಮಸ್ಯೆ ಸೇರಿದಂತೆ ಪದವೀಧರರ ಇತರೆ ಸಮಸ್ಯೆ ಬಗ್ಗೆ ವಿಧಾನಸೌಧದ ಹೊರಗೂ ಒಳಗೂ ಧ್ವನಿ ಎತ್ತುವ ಮತ್ತು ಪದವೀಧರರ ಜ್ವಲಂತ ಸಮಸ್ಯೆ ಪರಿಹರಿಸುವಲ್ಲಿ ಪಾಟೀಲ್ ಕೆಲಸ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಇದರ ಜೊತೆಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಮಿತಿ ರಚನೆ ಮಾಡಲಾಗಿದೆ. ಅನುದಾನ ರಹಿತ ಖಾಸಗಿ ಶಾಲೆಯ ಶಿಕ್ಷಕರ ಕುಟುಂಬಕ್ಕೆ ಆರೋಗ್ಯ ವಿಮಾ ಯೋಜನೆ ಜಾರಿ ಮಾಡಲು ಸಾಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ತಿಳಿಸಿದರು.

ಚಂದ್ರಶೇಖರ ಪಾಟೀಲ್ ಅವರು ವೈದ್ಯರಾಗಿ ವೃತ್ತಿ ಆರಂಭಿಸಿ ಪದವೀಧರರ ಹಲವಾರು ಹೋರಾಟಕ್ಕೆ ಸ್ಪಂದಿಸಿದ್ದಾರೆ.

ಪದವೀಧರ ನಿರುದ್ಯೋಗಿಗಳ ಸಮಸ್ಯೆಗಳಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಮತದಾರರು ಅವರ ಕೆಲಸಕ್ಕೆ ಬೆಂಬಲ ನೀಡಲು ಈ ಬಾರಿಯೂ ಆಶೀರ್ವಾದ ಮಾಡಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ