"ಜನಪ್ರಿಯ ನಾಯಕ ಕೆ ನೇಮಿರಾಜನಾಯ್ಕ| ತಾಯಿ ಮಗುವಿನ ಮನಕಲಕುವ ಪರಿಸ್ಥಿತಿಗೆ ಬೇಸರ ವ್ಯಕ್ತ|ಅಧಿಕಾರಿಗಳಿಗೆ ತರಾಟೆ "


ಕೆರೆಯಂತಾದ ಕೊಟ್ಟೂರು ಬಸ್ ನಿಲ್ದಾಣಕ್ಕೆ : ಶಾಸಕ ನೇಮಿರಾಜನಾಯ್ಕ ಭೇಟಿ

ನೂತನ ಬಸ್ ನಿಲ್ದಾಣಕ್ಕೆ 
ಕೆಕೆಆರ್ಟಿಸಿ 3.50 ಕೋಟಿ ರೂ ಅನುದಾನ ಮಂಜೂರು : ಶಾಸಕ ಕೆ ನೇಮಿರಾಜನಾಯ್ಕ

ಕೊಟ್ಟೂರು: ಪ್ರತಿಸಲ ಮಳೆ ಬಂದಾಗ ಕೊಟ್ಟೂರು ಬಸ್ ನಿಲ್ದಾಣ ನೀರು ತುಂಬಿ ಕೆರೆಯಂತಾಗಿ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. 
ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ  ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಕಂಡುಬಂದಿತ್ತು.
ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಹಾನಿಯಾಗಿರುವುದಿಲ್ಲ.

ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಶಾಸಕ ನೇಮಿರಾಜನಾಯ್ಕ ಮತ್ತು ಕೆಎಸ್ಆರ್ಟಿಸಿ ಡಿಸಿ ಜಗದೀಶ್ ಹಾಗೂ ಸಾರಿಗೆ ಇಲಾಖೆಯ ಎಂಜಿನಿಯರ್ ಸ್ಥಳಕ್ಕೆ ಗುರುವಾರ ಭೇಟಿನೀಡಿ ಪರಿಶೀಲಿಸಿದರು. 
ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ ತಾಯಿ ಮಗುವಿನ ಬಗ್ಗೆ ಬೇಸರ ವ್ಯಕ್ತಪಡಿಸಿದರು. ನಂತರ ಕೊಟ್ಟೂರು ನೂತನ ಬಸ್ ನಿಲ್ದಾಣಕ್ಕೆ ಕೆಕೆಆರ್ಟಿ ಸಿ ಅನುದಾನ ರೂ. 3.50 ಕೋಟಿ ರೂ ಮಂಜೂರಾಗಿದ್ದು ನೂತನ ಬಸ್ ನಿಲ್ದಾಣ ಕಾಮಗಾರಿ ಅಲ್ಲದೇ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾಗಿದೆ ಇದನ್ನು ಸಹ ಚುನಾವಣಾ ನೀತಿಸಂಹಿತೆ ತೆರವಾದ ನಂತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಕೆಎಸ್ಆರ್ಟಿಸಿಯ ಅಧಿಕಾರಿ ಹಾಗೂ ನೆರೆದಿದ್ದ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ ನೇಮರಾಜ್ ನಾಯಕ್  ತರಾಟೆ ತೆಗೆದುಕೊಂಡು ಇಷ್ಟು  ಎಲ್ಲಾ ಆದರೂ ಅಧಿಕಾರಿಗಳು ನಿಮ್ಮ ನಿರ್ಲಕ್ಷವೇ ಕಾರಣ ಕೂಡಲೇ ಯಾವುದೇ ರೀತಿ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಅಲ್ಲದೇ ಪಟ್ಟಣದ ಸ್ವಚ್ಛತೆ ಬಗ್ಗೆ ಕ್ರಮ ವಹಿಸಬೇಕೆಂದು ಸಿಬ್ಬಂದಿ ಹಾಗೂ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಅಮರೇಶ್ ಜಿ ಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ