ಪ್ರತಾಪ್ ಗೌಡ ಪಾಟೀಲ್ ಅವರಿಗೆ MLC ಸ್ಥಾನ ನೀಡಿ : ಬಿಜೆಪಿ ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಬಸವರಾಜ ಒತ್ತಾಯ

ಮಸ್ಕಿ :   ಮಸ್ಕಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ತಾಲೂಕಿನ ದೀನಸಮುದ್ರ

ಗ್ರಾಮ ಪಂಚಾಯತಿ ಸದಸ್ಯ ಹಾಗೂ ಮಸ್ಕಿ ಬಿಜೆಪಿ ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಬಸವರಾಜ ರವರು ಒತ್ತಾಯ ಮಾಡಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಹಾಗೂ ಇಂದಿನ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರತಾಪ್ ಗೌಡ ಪಾಟೀಲ್ ಅವರು ಕೂಡ ಒಬ್ಬರಾಗಿದ್ದಾರೆ. ಸೋಲು ಗೆಲುವು ಎರಡನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿದ್ದಾರೆ. ನಿರಂತರವಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಪರಿಶ್ರಮವನ್ನು ಪರಿಗಣಿಸಿ ರಾಜ್ಯದ ಬಿಜೆಪಿ ನಾಯಕರು ಹಾಗೂ ವರಿಷ್ಠರು ಪ್ರತಾಪ್ ಗೌಡ ಪಾಟೀಲ್ ಅವರಿಗೆ ಎಂ.ಎಲ್ಸಿ ಸ್ಥಾನವನ್ನು ನೀಡಬೇಕು ಎಂದು ಬಸವರಾಜ ದೀನಸಮುದ್ರ ರವರ ಪತ್ರಿಕೆ ಮ‌ೂಲಕ ಒತ್ತಾಯಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*