*ಎರಡನೇ ಬಾರಿಗೆ ಶ್ರೀ ಬಿ. ದೊಡ್ಡಬಸಪ್ಪ ರೆಡ್ಡಿ ರಾಜ್ಯಾಧ್ಯಕ್ಷರು.*
*ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರಸಂಘ (ರಿ) ದಾವಣಗೆರೆ.ಕ್ಕೆ
ಕೊಟ್ಟೂರು ದಿನಾಂಕ: 16.06.2024 ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಕರೆದ ರಾಜ್ಯ ಕಾರ್ಯಕಾರಿಣಿ ಸಭೆಯ ಅಚ್ಚುಕಟ್ಟಾದ ನಿರ್ವಹಣೆಗಾಗಿ ಹಾವೇರಿ ಜಿಲ್ಲಾಧ್ಯಕ್ಷರು ಹಾಗೂ ಹಾವೇರಿ ಜಿಲ್ಲೆಯ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ಸಂಘಟನಾತ್ಮಕ ಸೇವಾ ಮನೋಭಾವದಿಂದ ಮತ್ತೊಮ್ಮೆ ಮಾತೃಸಂಘದ ಗತವೈಭವವನ್ನು ಸಾರುವ ನಿಟ್ಟಿನಲ್ಲಿ, ಮತ್ತೊಮ್ಮೆ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಅವಕಾಶ ನೀಡಿ, ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟು ಸಂಘದ ಇತಿಹಾಸದಲ್ಲಿ ಈ ದಿನವನ್ನು ಅಚ್ಚಳಿಯದಂತೆ ಛಾಪು ಮೂಡಿಸಿದ ಎಲ್ಲಾ ಜಿಲ್ಲಾಧ್ಯಕ್ಷರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಕಾರ್ಯಕಾರಿಣಿ ಸಭೆಗೆ ಆಗಮಿಸಿ ತಮ್ಮ ಸಂಘಟನಾ ಬದ್ಧತೆಯನ್ನು ತೋರಿದ ರಾಜ್ಯ ಸಂಘದ ಪದಾಧಿಕಾರಿಗಳು, ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರುಗಳು, ತಾಲ್ಲೂಕು ಪದಾಧಿಕಾರಿಗಳು ಹಾಗೂ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ