ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿ ರವರಿಗೆ ಮನವಿ
ಮಸ್ಕಿ : ಪಟ್ಟಣದ ಬಸವೇಶ್ವರ ನಗರದ ತಹಶೀಲ್ದಾರರ ಕಚೇರಿಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡಲು ವಿಫಲಗೊಂಡ ಕೇಂದ್ರ ಶಿಕ್ಷಣ ಸಚಿವರನ್ನು ವಜಾ ಮಾಡಬೇಕು ಮತ್ತು ಪರೀಕ್ಷೆ ನಡೆಸುವ ಅಧಿಕಾರ ಆಯಾ ರಾಜ್ಯಗಳ ಸರ್ಕಾರಕ್ಕೆ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಯು ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಯು ವಾಲ್ಮೀಕಿ ವೃತ್ತದಿಂದ ಘೋಷಣೆ ಕೂಗುತ್ತ ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನೆ ಮಾಡುತ್ತಾ ದಂಡಾಧಿಕಾರಿ ಕಚೇರಿಯಲ್ಲಿ ಮಸ್ಕಿ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ
ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್ನಲ್ಲೂ ಗೋಲ್ಮಾಲ್ ನಡೆದೋಯ್ತು. ಬಳಿಕ ನೆಟ್ ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ (26/06/2024) ರಂದು ಅಂದರೇ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಆದೇಶಿಸಿದೆ.
ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಮಾರಾಟವಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ.
ನೀಟ್-ಯುಜಿ ಹಾಗೂ ಯಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ. ಕೊನೆ ಗಳಿಗೆಯಲ್ಲಿ ಏಕಾಏಕಿ ಪರೀಕ್ಷೆ ರದ್ದುಪಡಿಸಿದ್ದು, ಇನ್ನೂ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿದ್ದ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ವಿಫಲಗೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ತಾಲೂಕ ಸಂಚಾಲಕ ಮೌನೇಶ ತುಗ್ಗಲದಿನ್ನಿ ಇಂದು ದೇಶದ 270 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿತ್ತು. 2.2 ಲಕ್ಷ ಅಭ್ಯರ್ಥಿಗಳು ನೀಟ್ - ಪಿಜಿ ಪರೀಕ್ಷೆ ಬರೆಯಬೇಕಿತ್ತು.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿರುತ್ತದೆ.
ನೀಟ್ - ಪಿಜಿ
ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿ ಕೇಂದ್ರ ಸರ್ಕಾರ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದುಪಡಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಎಲ್ಲ ವಿಫಲತೆಎದ್ದು ಕಾಣುತ್ತದೆ.
ಇದೇ ವೇಳೆ ಕೇಂದ್ರವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ವಜಾಗೊಳಿಸಿದೆ. ಏಜೆನ್ಸಿಯ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಪರೀಕ್ಷಾ ಸುಧಾರಣೆಗಳನ್ನು ಶಿಫಾರಸು ಮಾಡಲು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು ಸ್ವಾಗತ ಆದರೆ ಪದೇ ಪದೇ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಈ ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವ ಸಾಧ್ಯತೆ ದಟ್ಟವಾಗಿವೆ. ಹಗಲು - ರಾತ್ರಿ ಎನ್ನದೆ ಕಷ್ಟ ಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪದೇ ಪದೇ ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳಿಂದ ಆತ್ಮಸ್ಥೈರ್ಯ ಮತ್ತು ನೆಮ್ಮದಿ ಹಾಳಾಗಿದೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ಕನಸುಗಳಿಗೆ ಪೆಟ್ಟು ಬಿದ್ದಿದೆ.
ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಇದರ ಜೊತೆಗೆ ಶೈಕ್ಷಣಿಕ ಸೀಟ್ ಹಂಚಿಕೆ ಮಾಡಲು ನೀಟ್ - ನೆಟ್ ಪರೀಕ್ಷೆ ನಡೆಸುವ ಅಧಿಕಾರವನ್ನು ಆಯಾ ರಾಜ್ಯಗಳ ಸರ್ಕಾರಕ್ಕೆ ನೀಡಬೇಕೆಂದು ಈ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ತಮ್ಮಲ್ಲಿ ಆಗ್ರಹಿಸುತ್ತದೆ ಎಂದು ತಹಶೀಲ್ ಕಚೇರಿಯ ಶಿರಸ್ತೇದಾರರಾದ ಸೈಯದ್ ಅಖ್ತರ್ ಅಲಿ ಅವರಲ್ಲಿ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರಾದ ಹುಸೇನಪ್ಪ ಇರಕಲ್, ಚನ್ನಬಸವ ಯಾಪಲಪರ್ವಿ,ರಶೀದ್ ಬನ್ನಿಗನೂರು, ರಮೇಶ ನಂಜಲದಿನ್ನಿ,ಮಹೇಂದ್ರ ತುಗ್ಗಲದಿನ್ನಿ, ಹುಚ್ಚಪ್ಪ ಬಸಾಪುರ, ಶರಣಪ್ಪ ನಂಜಲದಿನ್ನಿ,ಅಂಬರೀಶ ಬೋವಿ, ವಿವಿಧ ಕಾಲೇಜು
ವಿದ್ಯಾರ್ಥಿ - ವಿದ್ಯಾರ್ಥಿನಿಯರು ಯುವಕ ಯುವತಿಯರು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ