*ಸಚಿವ ಸ್ಥಾನ ಆಕಾಂಕ್ಷಿಯಲ್ಲ : ಶಾಸಕ ಡಾ ಎನ್ ಟಿ ಶ್ರೀನಿವಾಸ್ ಸ್ಪಷ್ಟನೆ*
ಕೂಡ್ಲಿಗಿ : ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ಮತದಾರ ಮುಖಂಡರ ಪ್ರೀತಿ ವಿಶ್ವಾಸದಿಂದ ಮೊದಲ ಬಾರಿಗೆ ನಾನು ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಜನ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಸೇವೆ ಮಾಡಲು ಪ್ರಾಮಾಣಿಕವಾಗಿ ಕೆಲಸಮಾಡುತ್ತೇನೆ. ನಾನು ವೃತ್ತಿಯಲ್ಲಿ ವೈದ್ಯನಾಗಿದ್ದ ರಿಂದ ರಾಜಕೀಯದಲ್ಲಿ ಸಾಕಷ್ಟು ಕಲಿಯುವುದು ಅವಶ್ಯಕತೆ ಇದೆ. ರಾಜಕೀಯದಲ್ಲಿ ಕೆಲವೊಂದು ಜವಾಬ್ದಾರಿ ಸ್ಥಾನ ನಿರ್ವಹಿಸಬೇಕೆಂದರೆ ಅನುಭವ ಬೇಕು. ನನಗೆ ರಾಜಕೀಯದಲ್ಲಿ ಸ್ವಲ್ಪ ಅನುಭವ ಕೊರತೆ ಇದೆ ಎಂಬುದು ನನ್ನ ಭಾವನೆ. ನನ್ನ ಉದ್ದೇಶ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ನನ್ನಗೆ ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ಕ್ಷೇತ್ರದ ಅಭಿಮಾನದಿಂದ ನಮ್ಮ ಕ್ಷೇತ್ರದ ಛಲವಾದಿ ಮಹಾಸಭಾ ಪದಾಧಿಕಾರಿಗಳು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿರುವುದು. ಪತ್ರಿಕೆಗಳಲ್ಲಿ ವರದಿ ಬಂದ ನಂತರವೇ ನನಗೆ ಗೊತ್ತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆ ಇರಲಿ. ನಾನು ಇನ್ನೂ ಆ ದೊಡ್ಡ ಮಟ್ಟಕ್ಕೆ ರಾಜಕೀಯದಲ್ಲಿ ಬೆಳೆದಿಲ್ಲ ಮೊದಲ ಬಾರಿ ಪಾದರ್ಪಣೆ ಈ ಕ್ಷೇತ್ರದ ಶಾಸಕನಾಗಿದ್ದೇನೆ ರಾಜಕೀಯ ಕ್ಷೇತ್ರದಲ್ಲಿ ನಮ್ಮ ವಾಲ್ಮೀಕಿ ಸಮುದಾಯದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಹಿರಿಯ ಶಾಸಕರಿದ್ದಾರೆ. ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ಶಾಸಕ ಡಾ ಎನ್.ಟಿ ಶ್ರೀನಿವಾಸ್ ಸ್ಪಷ್ಟನೆ ನೀಡಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ