ವಾರ್ಷಿಕ ವರದಿ ಮಹಾಸಭೆ ಯಶಸ್ವಿ

 

ಮಸ್ಕಿ : ಪಟ್ಟಣದ 6ನೇ ವಾರ್ಡ್ ನ ತುಳಸಿ ಕ್ರೇಡಿಟ್ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ವಾರ್ಷಿಕ ಮಹಾಸಭೆಯು ಮಸ್ಕಿಯ ಸಹಕಾರಿಯ ಆವರಣದಲ್ಲಿ ಬುಧವಾರ ಜರುಗಿತು. 

ಸಭೆಯ ಅಧ್ಯಕ್ಷತೆ ವಹಿಸಿದ್ದ ಭರತಕುಮಾರ್ ಮಾತನಾಡಿ 2023-24 ನೇ ಸಾಲಿನಲ್ಲಿ ಸಂಘವು ರೂ 2,71,299/- ಲಾಭಗಳಿಸಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಕೋರಿ ಅವರು ವಾರ್ಷಿಕ ವರದಿ ಮತ್ತು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು.

2023-24 ನೇ ಸಾಲಿನಲ್ಲಿ sahkari ಬ್ಯಾಂಕ್ ನಲ್ಲಿ ಉತ್ತಮ ವ್ಯವಹಾರ ನಡೆಸಿದ ಸದಸ್ಯರಿಗೆ ಸಭೆಯಲ್ಲಿ ಗೌರವಿಸಲಾಯಿತು.

ಈ ವೇಳೆ ಸಂಘದ ಉಪಾಧ್ಯಕ್ಷರಾದ ಬಸವರಾಜ ಬುಕ್ಕಣ್ಣ, ಆಡಳಿತ ಮಂಡಳಿಯ ಸದಸ್ಯರುಗಳು,ಷೇರುದಾರ ಸದಸ್ಯರು ಮತ್ತು ಸಿಬ್ಬಂದಿ ವರ್ಗರವರು ಸೇರಿದಂತೆ ಇನ್ನಿತರರು ಉಪಸ್ಥಿತಿ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ