ಆನ್ವರಿ ಸರಕಾರಿ ಶಾಲೆಯ ಹೊಸ ಕಟ್ಟಡದ ಮೇಲ್ಚಾವಣಿ ಕುಸಿತ ವಿದ್ಯಾರ್ಥಿ ಗಂಭೀರ ಗಾಯ.

 

ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಂದೆ ಗಂಗಪ್ಪ ತಲೆಗೆ ಗಂಭೀರ ಪೆಟ್ಟಾಗಿದ್ದು, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆನ್ವರಿ ಗೆ ದಾಖಲಿಸಲಾಗಿದ್ದು 5 ಹೊಲಿಗೆಗಳು ಬಿದ್ದಿವೆ. 

ನೂತನವಾಗಿ ನಿರ್ಮಾಣಗೊಂಡ ಕಟ್ಟಡ ಸಂಪೂರ್ಣವಾಗಿ ಕಳಪೆಯಾಗಿದ್ದು,

ಈ ಘಟನೆಯ ಹೊಣೆಯನ್ನು ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಹಾಗೂ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ಕಾರಣ ಇವರ ಮೇಲೆ ಸೂಕ್ತ ಕ್ರಮ ಆಗಬೇಕು. ಗುತ್ತಿಗೆದಾರನ ಲೈಸೆನ್ಸ್ ರದ್ದು ಆಗಬೇಕು ಎಂದು ಎಸ್ಎಫ್ಐ ಒತ್ತಾಯಿಸುತ್ತದೆ. 

ತಕ್ಷಣೆವೇ ಗಾಯಗೊಂಡ ವಿದ್ಯಾರ್ಥಿಯ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಸಂಬಂಧಪಟ್ಟ ಇಲಾಖೆ ಹಾಗೂ ತಾಲೂಕಾ ಆಡಳಿತ ಕೊಡಬೇಕು. 

ನಿರ್ಲಕ್ಷ್ಯ ವಹಿಸಿದರೆ ಬಿಇ ಓ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಸ್ಎಫ್ಐ ಎಚ್ಚರಿಸುತ್ತದೆ.

ಎಂದು ಎಸ್ ಎಫ್ ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಹಾಗೂ ವಿಶ್ವ ಅಂಗಡಿ ತಾಲೂಕು ಅಧ್ಯಕ್ಷರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ