ಜಿಲ್ಲಾ ಮಟ್ಟದ ಪ್ರಶಸ್ತಿಗೆ ವಿಠ್ಠಲ ಕೆಳೂತ್ ಆಯ್ಕೆ
ಮಸ್ಕಿ : ಪತ್ರಿಕೋದ್ಯಮದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೊಡಮಾಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಮಸ್ಕಿ ತಾಲೂಕಿನ ಉದಯವಾಣಿ ವರದಿಗಾರ ವಿಠ್ಠಲ ಕೆಳೂತ್ ಅವರು ಆಯ್ಕೆಯಾಗಿದ್ದಾರೆ.
ವಸ್ತುನಿಷ್ಟ ಸುದ್ದಿ, ಬರಹಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸುವುದು ಜಿಲ್ಲಾ ಪತ್ರಕರ್ತರ ಸಂಘದಿಂದ ಮಾಡುತ್ತಿದ್ದು. ವಿಠ್ಠಲ ಕೆಳೂತ್ ಅವರು ಮೂಲತಃ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡದವರಾಗಿದ್ದು, ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕೋರ್ಸ್ ಮುಗಿಸಿರುವ ಇವರು 2015ರಲ್ಲಿ ಬೆಂಗಳೂರು ಆವೃತ್ತಿಯ ಹೊಸದಿಗಂತ ಪತ್ರಿಕೆಯಲ್ಲಿ ಉಪ ಸಂಪಾದಕನಾಗಿ ಕ್ಷೇತ್ರಕ್ಕೆ ಕಾಲಿಟ್ಟರು. 2016ರಿಂದ 2020ರವರೆಗೆ ಹೊಸದಿಗಂತ ಪತ್ರಿಕೆಯ ಮಸ್ಕಿ ತಾಲೂಕ ವರದಿಗಾರರಾಗಿ ಕಾರ್ಯ ನಿರ್ವಹಿಸಿದರು. 2021ರಿಂದ 2023ರವೆರೆಗೆ ಸಮರ್ಥವಾಣಿ ಪತ್ರಿಕೆಯ ವರದಿಗಾರನಾಗಿ ಕೆಲಸ ಮಾಡಿದರು. ಇದೀಗ ಉದಯವಾಣಿ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಖರ ಲೇಖನಗಳ ಮೂಲಕ ಈ ಭಾಗದ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತ ಅವುಗಳಿಗೆ ಪರಿಹಾರ ಕಲ್ಪಿಸುವ ಕಾರ್ಯ ನಿರಂತರ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷದಿಂದ ನಿರಂತರ ಪತ್ರಿಕೋದ್ಯಮದಲ್ಲಿ ಉಪ ಸಂಪಾದಕ, ವರದಿಗಾರನಾಗಿ ಸೇವೆ ಸಲ್ಲಿಸುತ್ತಿರುವ ವಿಠ್ಠಲ ಕೆಳೂತ್ ಅವರು ಕಾಲೇಜು ವಿದ್ಯಾರ್ಥಿ ಜೀವನದಲ್ಲಿ ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಬರಹ ಬರೆದು ವಿದ್ಯಾರ್ಥಿ ಜೀವನದಲ್ಲಿ ಗಮನ ಸೆಳೆದಿದ್ದಾರೆ. ಇಷ್ಟೇಲ್ಲಾ ಸೇವೆ ಸಲ್ಲಿಸಿದ ಬಳಿಕ ರಾಯಚೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಇದೇ ಜುಲೈ 28 ರಂದು ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್, ಹಾಗೂ ಡಾ. ಬಾಬು ಜಗಜೀವನರಾಮ ಸಮುದಾಯ ಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ಮಸ್ಕಿ ತಾಲೂಕಿನ ಪತ್ರಕರ್ತರು, ಜನಪ್ರತಿನಿಧಿಗಳು, ಸ್ನೇಹ ಬಳಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ