ಪ್ರಾಸಿಕ್ಯೂಷನ್ ಗೆ ಅನುಮತಿಯು ರಾಜಕೀಯ ಪ್ರೇರಿತ ಹಾಗೂ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ವಿರೋಧಿ ನಡೆ : ಆನಂದ ಕುಮಾರ ವೀರಾಪುರ
ಮಸ್ಕಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ ಮುಖ್ಯಮಂತ್ರಿ.
ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ವಿರೋಧಿ ನಡೆ.ಎಂದು ಆನಂದ ಕುಮಾರ್ ವೀರಾಪುರ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹಿಂದುಳಿದ ವರ್ಗ ಇವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು
ರಾಜ್ಯಪಾಲರ ಗೌರವಯುತ ಸ್ಥಾನಕ್ಕೆ ಕಳಂಕ.ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದು ಈ ಮೂಲಕ ಸಾಬೀತಾಗಿದೆ.
ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಈ ಮೂಲಕ ಜನಪರ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ವಿಫಲ ಪ್ರಯತ್ನ ನಡೆಸುವ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ.ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಜೊತೆಗಿದೆ.ಸಿದ್ದರಾಮಯ್ಯ ಅವರ ಮೇಲಿನ ಆರೋಪ ನಿರಾಧಾರ.ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಷಡ್ಯಂತ್ರಕ್ಕೆ ನಾವು ಬಗ್ಗೋದಿಲ್ಲ ಜಗ್ಗೋದಿಲ್ಲ.
ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಸಂವಿಧಾನಾತ್ಮಕವಾದ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ.ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿ ಕೂತಿದ್ದಾರೆ. ಮುರುಗೇಶ್ ನಿರಾಣಿಯವರ ತನಿಖೆಯ ಕಡತವೂ ಮೂಲೆಯಲ್ಲಿಯೇ ಧೂಳು ಹಿಡಿಯುತ್ತಲೇ ಇದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಧಾರವಿಲ್ಲದ ಖಾಸಗಿ ದೂರಿಗೆ ಮಾತ್ರ ರಾಜ್ಯಪಾಲರು ಭಯಂಕರ ಚುರುಕಾಗಿ ಕೆಲಸ ಮಾಡಿದ್ದಾರೆ ಎಂದರೆ ಇದು ರಾಜಕೀಯ ಪ್ರೇರಿತ ಷಡ್ಯಂತ್ರ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತದೆ.ಇವರು ರಾಜ್ಯಪಾಲರೊ, ಬಿಜೆಪಿಯ ಹಿತ ಪಾಲಕರೋ?ರಾಜಭವನವು ರಾಜಕಾರಣ ಭವನವಾಗಿ ಮಾರ್ಪಟ್ಟಿದೆ.ರಾಜ್ಯಪಾಲರು ಬಿಜೆಪಿಯ ರೋಬೊಟ್ ನಂತೆ ಕೆಲಸ ಮಾಡುತ್ತಿದ್ದಾರೆ.
ಮೋ-ಶಾ ಜೋಡಿಯು ರಾಜ್ಯಪಾಲರ ಹುದ್ದೆಯನ್ನು ಬಿಜೆಪಿಯೇತರ ಸರ್ಕಾರಗಳಿಗೆ ಕಿರುಕುಳ ನೀಡಲು ಬಳಸಿಕೊಳ್ಳುತ್ತಿರುವುದಕ್ಕೆ ಹಲವು ಉದಾಹರಣೆಗಳಿಗೆ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ ಸಂವಿಧಾನಾತ್ಮಕವಾಗಿ, ಪ್ರಜಾಪ್ರಭುತ್ವದ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಬಿಜೆಪಿಯ ಪಿತೂರಿ.ಇದು ಬಹಳ ದಿನ ಉಳಿಯಲ್ಲ ಮುಂದಿನ ದಿನಮಾನಗಳಲ್ಲಿ ಪ್ರಜೆಗಳೇ ತಕ್ಕ ಉತ್ತರ ನೀಡುವರು ಎಂದು ಆನಂದ ಕುಮಾರ್ ವೀರಾಪುರ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹಿಂದುಳಿದ ವರ್ಗ ಇವರು ಪತ್ರಿಕಾ ಹೇಳಿಕೆ ಮೂಲಕ ಕೇಂದ್ರಕ್ಕೆ ಎಚ್ಚರಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ