*ಗಣೇಶ್ ಚತುರ್ಥಿ, ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ*
"ಪಟ್ಟಣದ ಹರಪನಹಳ್ಳಿ ರಸ್ತೆ ಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಆವರಣದಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಭಾನುವಾರ ಶಾಂತಿ ಸಭೆ ನೆಡೆಸಿದರು."
ಕೊಟ್ಟೂರು : ಮಾರ್ಗಸೂಚಿ ಪಾಲನೆಯೊಂದಿಗೆ ಶಾಂತಿಯುತವಾಗಿ ಗಣೇಶೋತ್ಸವ ,ಈದ್ ಮಿಲಾದ್ ಆಚರಿಸಲು ಡಿವೈಎಸ್ಪಿ ಮಲ್ಲೇಶ್ ಮಲ್ಲಾಪುರ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಪೋಲಿಸ್ ಇಲಾಖೆ ಆಯೋಜಿಸಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ತಾಲೂಕಿನ ವಿವಿಧ ಸಮುದಾಯ, ಧರ್ಮಗಳ ಮುಖಂಡರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿವೈಎಸ್ಪಿ ಮಲ್ಲೇಶ್ ಮಲ್ಲಾಪುರ ಮಾತನಾಡಿ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಸಾಮರಸ್ಯದಿಂದ ಆಚರಿಸಬೇಕು. ಯಾವುದೇ ಅಡಚಣೆ ಆಗದಂತೆ ಎಚ್ಚರಿಕೆ ವಹಿಸಬೇಕು .ಮೂರ್ತಿ ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯಲು ಪಟ್ಟಣ ಪಂಚಾಯಿತಿ,ಕೆಇಬಿ, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿ ಅವಕಾಶ ಕಲ್ಪಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಒಂದೆಡೆ ಅನುಮತಿಯನ್ನು ನೀಡುವರು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರದ ನಿಯಮದಂತೆ ಮೂರು, ಐದು, ಅನ್ನೊಂದು ದಿನಗಳ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ ಎಂದು ತಿಳಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ