ಒಳಮೀಸಲಾತಿ ಹೋರಾಟಕ್ಕೆ ಸಿಕ್ಕ ಜಯ: ರಮೇಶ್ ಉದ್ಬಾಳ.
ಮಸ್ಕಿ : ಪರಿಶಿಷ್ಟ ಜಾತಿಯಲ್ಲಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕೆಂಬ ಮೂರು ದಶಕದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಪ್ರಕಟಿಸಿದ ತೀರ್ಪು ಐತಿಹಾಸಿಕ ಗೆಲುವು ತಂದುಕೊಟ್ಟಿದೆ ಎಂದು ಮಸ್ಕಿ ಬಿಜೆಪಿ ಪಕ್ಷದ ಮಂಡಳದ ಪ್ರಧಾನ ಕಾರ್ಯದರ್ಶಿ ರಮೇಶ್ ಉದ್ಬಾಳ ರವರು ಹೇಳಿದ್ದಾರೆ.
ಗುರುವಾರ ಪತ್ರಿಕಾ ಹೇಳಿಕೆ ನೀಡಿದ್ದ ಅವರು ಸತತ 30 ವರ್ಷಗಳಿಂದ ದಲಿತಪರ ಸಂಘಟನೆಗಳು, ಜನಪ್ರತಿನಿಧಿಗಳು ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರ ಫಲ ದೊರೆತಿದೆ.
ಕತ್ತಲ ಬದುಕಿನಲ್ಲಿದ್ದ ಎಸ್ಸಿಯಲ್ಲಿ ಬಹಳಷ್ಟು ಸಮುದಾಯಗಳಿಗೆ ಕೋರ್ಟ್ ತೀರ್ಪು ಐಸಿಯು ನಲ್ಲಿದ್ದವರಿಗೆ ಬದುಕುವ ಭರವಸೆಯಂತೆ ಆಶಾಭಾವನೆ ಮೂಡಿಸಿದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಸಹಕಾರ ನೀಡಿದ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಹಾಗೂ ಅಂದು ಎಸ್ʼಸಿ ಸಮುದಾಯದ ಸಚಿವರಾದಂತಹ ಗೋವಿಂದ ಕಾರಜೋಳ ಸೇರಿದಂತೆ ಎಲ್ಲಾ ರಾಜ್ಯ ಬಿಜೆಪಿಯ ಎಲ್ಲ ನಾಯಕರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ