ಸಿದ್ದರಾಮಯ್ಯ ಮೇಲಿನ ಪ್ರಾಸಿಕ್ಯೂಶನ್ ಅನುಮತಿ ಖಂಡಿಸಿ ಬೃಹತ್ ಪ್ರತಿಭಟನೆ
ಮಸ್ಕಿ : ಅಹಿಂದ ವರ್ಗಗಳ ನಾಯಕರು, ಶೋಷಿತ ಸಮುದಾಯಗಳ ನೇತಾರರು, ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ಸರ್ಕಾರದ ಅಣತಿಯಂತೆ ಸಂವಿಧಾನ ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ಹಳೇ ಬಸ್ ನಿಲ್ದಾಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದ ಬಳಿ ಮಸ್ಕಿ ತಹಸೀಲ್ದಾರರಾದ ಡಾ.ಮಲ್ಲಪ್ಪ .ಕೆ.ಯರಗೋಳ ಇವರ ಮುಖಾಂತರ ರಾಷ್ಟ್ರಪತಿಯವರಿಗೆ ಮಸ್ಕಿ ತಾಲೂಕಿನ ವತಿಯಿಂದ ಕ್ಷೇತ್ರದ ಶಾಸಕರು ಹಾಗೂ ಸರ್ವ ಕಾರ್ಯಕರ್ತರ ಸಮ್ಮುಖದಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.
ಕೇಂದ್ರದ ಬಿಜೆಪಿ ಸರ್ಕಾರದ ಅಣತಿಯಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಅಹಿಂದ ವರ್ಗಗಳ ನಾಯಕರು, ಶೋಷಿತ ವರ್ಗಗಳ ನೇತಾರರು ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ವಿರುದ್ಧ, ಸಂವಿಧಾನ ಬಾಹಿರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನಾರ್ಹವಾಗಿದೆ. ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರ ನಡೆ ರಾಜಭವನಕ್ಕೆ ಅಪಮಾನವಾಗಿದೆ. ದುರುಪಯೋಗಪಡಿಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಜನರಿಗೆ ನೀಡಿದ ಐದು ಗ್ಯಾರಂಟಿ ಭರವಸೆಗಳಂತೆ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿಯಂತಹ 5 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಾಡಿನ ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಜನ ಸಮುದಾಯಗಳ ಬಡವರ ಜನಮೆಚ್ಚುಗೆ ಗಳಿಸಿದೆ. ಇದನ್ನು ಸಹಿಸಿಕೊಳ್ಳಲಾಗದ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಎನ್‌ಡಿಎ ಪಾಲುದಾರ ಪಕ್ಷವಾದ ಜೆಡಿಎಸ್ ನಾಯಕರು, ದುರುದ್ದೇಶದಿಂದ ಮಾನ್ಯ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣವನ್ನು ನೆಪ ಮಾಡಿಕೊಂಡು ಸ್ಪಷ್ಟ ಜನಾದೇಶವನ್ನು ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಹೊರಟಿದ್ದಾರೆ.
ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಅಲ್ಲಿನ ಸರ್ಕಾರಗಳಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಬಿಜೆಪಿ ಹೊಂಚು ಹಾಕುತ್ತಿದೆ. ಕೇಂದ್ರದ ಸ್ವಾಯತ್ತ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿಗಳನ್ನು ಭೂ ಬಿಡುವ ಮೂಲಕ ಮೂಲಕ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಜೈಲಿಗೆ ಹಾಕಲಾಗಿದೆ. ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೂರೇನ್ ಮೇಲೆ ಸುಳ್ಳು ಕೇಸ್ ದಾಖಲಿಸಿದೆ. ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ನಿರಂತರ ಸೇಡಿನ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಕರ್ನಾಟಕದಲ್ಲಿ ಡಿ.ದೇವರಾಜ್ ಅರಸು ಅವರ ನಂತರ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ಜನಪರ ಕಾರ್ಯಕ್ರಮಗಳನ್ನು ನೀಡಿ, ಸಮರ್ಥವಾಗಿ ಅಧಿಕಾರ ನಡೆಸುತ್ತಿರುವ ಹಿಂದುಳಿದ ವರ್ಗಗಳ ನಾಯಕರಾದ ಸಿಎಂ ಸಿದ್ದರಾಮಯ್ಯನವರ ಮೇಲೆ ದುರುದ್ದೇಶಪೂರ್ವಕವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ವಿವಿಧ ಹಗರಣಗಳಲ್ಲಿ ಆರೋಪಿಗಳಾಗಿರುವ ಬಿಜೆಪಿಯ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಗಣಿಲೂಟಿಕೋರ ಜನಾರ್ದನ ರೆಡ್ಡಿ ಹಾಗೂ ಕೇಂದ್ರದ ಹಾಲಿ ಸಚಿವ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ, ಲೋಕಾಯುಕ್ತರು ರಾಜ್ಯಪಾಲರಿಗೆ ವರದಿ ಸಲ್ಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದರೂ ಅನುಮತಿ ನೀಡದೇ, ಹಿಂದುಳಿದ ವರ್ಗದ ನಾಯಕರೆಂಬ ಕಾರಣಕ್ಕೆ ಸಿದ್ದರಾಮಯ್ಯನವರ ಮೇಲೆ ಖಾಸಗಿ ವ್ಯಕ್ತಿಗಳ ದೂರು ಆಧರಿಸಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು, ಹಿಂದುಳಿದ ವರ್ಗದ ನಾಯಕನ ರಾಜಕೀಯ ಜೀವನವನ್ನು ಮುಗಿಸುವ ವ್ಯವಸ್ಥಿತ ಹುನ್ನಾರವಾಗಿದೆ.
ಸಂವಿಧಾನ ಬಾಹಿರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಫಾವರ್‌ಚಂದ್ ಗೆಪ್ಲೋಟ್ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು. ಜನಾದೇಶ ಪಡೆದ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದುರ್ಬಲಗೊಳಿಸುತ್ತಿರುವ ರಾಜ್ಯಪಾಲರ ಮೇಲೆ ಮಾನ್ಯ ರಾಷ್ಟ್ರಪತಿಗಳು ಸೂಕ್ತ -ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆ. ಇಂತಹ ಸಂದರ್ಭದಲ್ಲಿ ಮಸ್ಕಿ ತಾಲೂಕಾ ಅಹಿಂದ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಿದ್ದರಾಮಯ್ಯನವರ ಅಭಿಮಾನಿ ಬಳಗ ಮಾನ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಒಕ್ಕೊರಲಿನಿಂದ ಬೆಂಬಲಿಸುತ್ತೇವೆ ಎಂದು ಹಳೇ ಬಸ್ ನಿಲ್ದಾಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದ ಬಳಿ ಮಸ್ಕಿ ತಹಸೀಲ್ದಾರರಾದ ಡಾ.ಮಲ್ಲಪ್ಪ .ಕೆ.ಯರಗೋಳ ಇವರ ಮುಖಾಂತರ ರಾಷ್ಟ್ರಪತಿಯವರಿಗೆ ಮಸ್ಕಿ ತಾಲೂಕಿನ ವತಿಯಿಂದ ಕ್ಷೇತ್ರದ ಶಾಸಕರು ಹಾಗೂ ಸರ್ವ ಕಾರ್ಯಕರ್ತರ ಸಮ್ಮುಖದಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಆರ್.ಬಸನಗೌಡ ತುರುವಿಹಾಳ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಹನುಮಂತಪ್ಪ ಮುದ್ದಾಪುರ, ಬಗರ ಹುಕ್ಕಮ್ ಸದಸ್ಯರಾದ ಬಸಪ್ಪ ಜಂಗಮರ ಹಳ್ಳಿ, ನಿರೂಪದೇಪ್ಪ ವಕೀಲರು,ಆನಂದ ಕುಮಾರ್ ವೀರಾಪುರ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹಿಂದುಳಿದ ವರ್ಗ,ನಾರಾಯಣಪ್ಪ ಕಾಸ್ಲಿ,ಮಲ್ಲಯ್ಯ ಮುರಾರಿ ಮಸ್ಕಿ,ಕೃಷ್ಣ ಡಿ ಚಿಗರಿ,ಬಸನಗೌಡ ಮಾರಲ ದಿನ್ನಿ, ಎ.ಗೌತಮಿ ಮಹಿಳಾಧ್ಯಕ್ಷರು, ಬಲವಂತರಾಯ ಗೌಡ ವಟಗಲ್,ಅಶೋಕ ಉಮಲೂಟಿ, ಕರಿಯಪ್ಪ ಹಾಲಾಪುರ,ನಾಗರೆಡ್ಡೆಪ್ಪ ದೇವರ ಮನಿ,ದುರುಗೇಶ್ ವಕೀಲರು,ಮಲ್ಲಪ್ಪ ಗುರಿಕಾರ ಮೆದಿಕಿನಾಳ,ಚನ್ನಪ್ಪ ವಕೀಲರು,ಮಲ್ಲನ ಗೌಡ ಸುಂಕನೂರು, ಸೇರಿದಂತೆ ತಾಲೂಕಿನ ಹಿರಿಯ,ಯುವ ಘಟಕದ ವಿವಿಧ ಘಟಕದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ