ವಿದ್ಯಾರ್ಥಿಗಳೇ ಓದಿನತ್ತ ಗಮನ ಹರಿಸಿ: ಮಾನಪ್ಪ

 ಮಸ್ಕಿ: ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ ವಾದದ್ದು. ಹೀಗಾಗಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಬೇಕೆಂದು ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಮಾನಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಶಿಕ್ಷಕರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು ಅಂದಾಗ ಮಾತ್ರ ಸಾಧನೆ ಸುಲಭವಾಗುತ್ತದೆ. ಇಲ್ಲದಿದ್ದರೆ ಬದುಕು ಬಹಳ ಕಷ್ಟಕರವಾಗುತ್ತದೆ ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ,ಸಂಸ್ಥೆಯ ಅಧ್ಯಕ್ಷ ಸುಭಾಷ್ ಕೊರೆಕರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಪಿಯುಸಿ ಹಂತಕ್ಕೆ ಬಂದಿದ್ದು, ಬದುಕಿನ ದಿಕ್ಕನ್ನೇ ಬದಲಾಯಿಸುವ ಈ ಹಂತ ಜೀವನದ ಅತ್ಯಮೂಲ್ಯವಾದ ಘಟ್ಟ. ಆದುದರಿಂದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಾರ್ಥಕತೆಗೊಳಿಸುವಲ್ಲಿ ಶ್ರದ್ಧಾಪೂರ್ವಕವಾಗಿ ಸಕ್ರಿಯವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನಿವಾರ್ಯ‌ಎಂದರು.    

ಕಾಲೇಜಿನ ಪ್ರಾಚಾರ್ಯರಾದ ಲಕ್ಷ್ಮಣ ಕರ್ಲಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದಾಗಿ ಹಾಳಾಗುತ್ತಿದ್ದಾರೆ. ಓದುವ ಸಮಯದಲ್ಲಿ ಮೊಬೈಲ್‌ ನಿಂದ ದೂರವಿರಿ. ತಂತ್ರಜ್ಞಾನಗಳನ್ನು ನಿಮ್ಮ ಜ್ಞಾನಕ್ಕೆ ಅನುಕೂಲವಾಗುವಂತೆ ಉಪಯೋಗಿಸಿಕೊಳ್ಳಿ. ಇಲ್ಲದಿದ್ದರೆ ಮೊಬೈಲ್‌ ನಿಮ್ಮ ಬದುಕನ್ನು ನಾಶ ಮಾಡುತ್ತದೆ ಎಂದು ಎಚ್ಚರಿಸಿದರು. 

ವಿದ್ಯಾರ್ಥಿನಿಯರಾದ ಶರಣಮ್ಮ ಮತ್ತು ಸಂಗಡಿಗರ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು.ಕಾರ್ಯಕ್ರಮದ ಕುರಿತು ಮಾತನಾಡಿದವರು 

ಉಪನ್ಯಾಸಕರಾದ ಹುಸೇನಬಾಷಾ,ಶರಣಬಸವ, ಪರಮೇಶ,ಬನಶ್ರೀ ಹಾಗೂ ವಿದ್ಯಾರ್ಥಿಗಳಾದ ಅಂಬಿಕಾ,ಹನುಮಂತಿ, ದುರುಗಮ್ಮ, ಪವಿತ್ರ,ತಾಯಮ್ಮ,ಕಿರಣ, ಅಮರೇಶ,ರಾಧಿಕ 

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪನ್ಯಾಸಕರಾದ ಎಮ್ ಡಿ ಯೂಸೂಫ್,ಪವಿತ್ರ,ತಬಸುಮ್ ಹಾಗೂ ವೇದಿಕೆಯ ಮುಂಭಾಗ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.        

ವಿದ್ಯಾರ್ಥಿನಿಯರಾದ ಶರಣಮ್ಮ ಮತ್ತು ಸಂಗಡಿಗರ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು.ವಿದ್ಯಾರ್ಥಿನಿ ಭಾಗ್ಯ ನಿರೂಪಿಸಿದರೇ,ನಾಗರತ್ನ ಸ್ವಾಗತಿಸಿದರು.ನಿಂಗರಾಜ ವಂದಿಸಿದರು.

   

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*