ಅಡವಿಭಾವಿ ತಾಂಡಾ ವಸತಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

 

ಮಸ್ಕಿ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಲಿಂಗಸೂರ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಅಡವಿಭಾವಿ ತಾಂಡಾ ಮಸ್ಕಿ ವಸತಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಶಾಲೆಯ ಮುಖ್ಯ ಗುರುಗಳು ಅವರು ಧ್ವಜಾರೋಹಣ ನೆರವೇರಿಸಿದರು. 

ಧ್ವಜಾರೋಹಣ ಮುನ್ನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಲಾಯಿತು. ಶಾಲೆ ವಿದ್ಯಾರ್ಥಿಗಳು ರಾಷ್ಟ್ರಗೀತೆ ಪ್ರಸ್ತುತಪಡಿಸಿದರು‌. 

ಪುಟಾಣಿ ಮಕ್ಕಳು ದೇಶದ ಮಹನೀಯರ ವೇಷ ಭೂಷಣ ತೊಟ್ಟು ಭಾಷಣ ಮಾಡಿ ನೋಡಗರ ಗಮನ ಸೆಳೆದರು.

ಈ ವೇಳೆ,ಜಿ.ಪಂ ಮಾಜಿ ಸದ್ಯಸರು, ಗ್ರಾ ಪಂ. ಪಂಚಾಯತಿ ಅಧ್ಯಕ್ಷರು ಉಪಾಧಕ್ಷರು ಹಾಗೂ ವಸತಿ ಶಾಲೆಯ ಮುಖ್ಯ ಗುರುಗಳು ಸಿಬ್ಬಂದಿಗಳು,ಮತ್ತು ಊರಿನ ಪ್ರಮುಖ ಮುಖಂಡರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*