ಮಸ್ಕಿ ಜಲಾಶಯಕ್ಕೆ ಪ್ರತಾಪ್ ಗೌಡ ಪಾಟೀಲ್ ಬಾಗಿನ ಅರ್ಪಣೆ

ಮಸ್ಕಿ :ಮಸ್ಕಿ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಪ್ರತಾಪ್‌ ಗೌಡ ಪಾಟೀಲ ರವರು ಮಸ್ಕಿ ಜಲಾಶಯ ತುಂಬಿರುವುದರಿಂದ ರೈತರಿಗೆ ಗಂಗಾಮಾತೆ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸಿ ಜಲಾಶಯಕ್ಕೆ ಬಾಗಿನ ಅರ್ಪಿಸಿರುವುದಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ಅವರು ಹೇಳಿದ್ದಾರೆ.

ತಾಲೂಕಿನ ಮಾರಲದಿನ್ನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಕಾರ್ಯಕರ್ತರೊಂದಿಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭಾಗೀನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಂತರ ಮಾತನಾಡಿದ ಅವರು ಹೆಚ್ಚು ಮಳೆ ಆಗಿದ್ದರಿಂದ ನಮ್ಮ ಜಲಾಶಯಭರ್ತಿಯಾಗಿದ್ದು ನಮ್ಮ ಭಾಗದ ರೈತರಿಗೆ ಸಂತಸ ತಂದಿದೆ. ನೀರನ್ನು ವ್ಯರ್ಥ ಮಾಡದೇ ಉತ್ತಮ ಬೆಳೆ ಬೆಳೆಯಬೇಕೆಂದು ರೈತರಲ್ಲಿ ಮನವಿ ಮಾಡಿದರು ನಂತರ ತಾವೇ ಸ್ವತಃ ಕಾರ್ಯಕರ್ತರ ಸಮ್ಮುಖದಲ್ಲಿ ಗದ್ದೆಯಲ್ಲಿ ಇಳಿದು ಭತ್ತ ನಾಟಿ ಮಾಡಿ ಗಮನ ಸೆಳೆದರು.

ಈ ವೇಳೆ,ಅಧಿಕಾರಿಗಳು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*