"ಪ್ರಜಾತಂತ್ರಕ್ಕೆ ಮಾರಕವಾದ ರಾಜ್ಯಪಾಲ ಹುದ್ದೆ ರದ್ದುಗೊಳಿಸಲು ಸಿಪಿಐ ಪಕ್ಷದಿಂದ ಅಗ್ರಹ "
*ಪ್ರಜಾತಂತ್ರಕ್ಕೆ ಮಾರಕವಾಗಿರುವ ರಾಜ್ಯಪಾಲರ ಹುದ್ದೆ ರದ್ದು ಗೋಳಿಸಲು ಸಿಪಿಐ ಪಕ್ಷದ ತಾಲೂಕು ಕಾರ್ಯದರ್ಶಿ ಕೆ ರೇಣುಕಮ್ಮ ಒತ್ತಾಯಿಸಿದರು*
ಕೊಟ್ಟೂರು: ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಆಗ್ರಹ ಪಡಿಸಿ ದ್ವಾರ..ಮಾನ್ಯ ತಹಶೀಲ್ದಾರರು ಮುಖಾಂತರ ಭಾರತ ಸರ್ಕಾರ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಇಲ್ಲಿಯ ಕೊಟ್ಟೂರು ಉಪ ತಹಸಿಲ್ದಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಭಾರತ ಕಮ್ಯುನಿಸ್ಟ್ ಪಕ್ಷ (ಸಿ ಪಿ ಐ )ದ ತಾಲೂಕು ಕಾರ್ಯದರ್ಶಿ ಕೆ ರೇಣುಕಮ್ಮ ಮಾತನಾಡಿ ಕರ್ನಾಟಕ ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ.ಜನತಂತ್ರ ವ್ಯವಸ್ಥೆಯಲ್ಲಿ ಜನರಿಂದ ಮತ ಪಡೆದು ಬಹುಮತದಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಪಕ್ಷದ ಕುಟಿಲ ನೀತಿ ಬಹಿರಂಗವಾಗುತ್ತಿದೆ.
ಮೂಡ ಪ್ರಕರಣದಲ್ಲಿ ಮುಖ್ಯ ಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಕಛೇರಿ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬರುತ್ತಿದೆ. ರಾಜ್ಯಪಾಲರ ಕಚೇರಿಗೆ ಲೋಕಾಯುಕ್ತ ಸಂಸ್ಥೆ ಇತರೆ ಪ್ರಕರಣದಲ್ಲಿ ತನಿಖೆಗೆ ಅನುಮತಿ ಕೇಳಿ ವರ್ಷಗಳೇ ಕಳೆದರೂ ಅವುಗಳ ಬಗ್ಗೆ ಯಾವುದೇ ತೀರ್ಮಾನ ಮಾಡದ ರಾಜ್ಯಪಾಲರು.ಮೂಡ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಮಾನ ಪೂರ್ಣ ರಾಜಕೀಯ ಪ್ರೇರಿತ ಎಂಬುದಕ್ಕೆ ಸಾಕ್ಷಿಯಾಗಿದೆ.ಎಂದರು
ಈಗಾಗಲೇ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಅಂದರೆ ತಮಿಳುನಾಡು.ಕೇರಳ,ಪಾಂಡಿಚೇರಿ.ಪಶ್ಚಿಮ ಬಂಗಾಳ.ರಾಜಸ್ಥಾನ ಇತರೇ ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆದಿರುವುದು ಬಯಲಾಗಿದೆ.
ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುವ ಹಾದಿ ಹಿಡಿದಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಹುದ್ದೆ ರದ್ದತಿಗೆ ಇದು ಸಕಾಲವಾಗಿದೆ.
ಸಂವಿಧಾನ ಬದ್ದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು. ರಾಜ್ಯದ ಸ್ವಾಯತ್ತ ಅಧಿಕಾರದಲ್ಲಿ ರಾಜ್ಯಾಪಾಲರ ಹಸ್ತಕ್ಷೇಪ ನಿಲ್ಲಿಸಲು.ಬಿಜೆಪಿ ಮತ್ತು ಆರ್.ಎಸ್.ಎಸ್.ಚಿಂತನೆಯನ್ನು ರಾಜ್ಯಪಾಲರ ಮೂಲಕ ಜಾರಿಗೊಳಿಸುವ ಹುನ್ನಾರ ತಪ್ಪಿಸಲು ರಾಜ್ಯಪಾಲ ಹುದ್ದೆ ರದ್ದತಿಗೆ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯಪಾಲ ಹುದ್ದೆ ರದ್ದತಿಗೆ ಆಗ್ರಹಿಸುತ್ತದೆ.
ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತಾಲೂಕು ಕಾರ್ಯಕರ್ತರು ಕೊಟ್ರು ಬಸಣ್ಣ ರಾಂಪುರ್ , ಕೆ ಕೊಟ್ರೇಶ್ , ಪಿ ಚಂದ್ರಶೇಖರ್ ಡಿಎಸ್ಎಸ್ ತಾಲೂಕ ಅಧ್ಯಕ್ಷರು, ಕೊಟ್ಟೂರು ಹನುಮಕ್ಕ ಕಾಳಾಪುರ ಭಾರತೀಯ ಮಹಿಳಾ ಒಕ್ಕೂಟದ ತಾಲೂಕು ಅಧ್ಯಕ್ಷರು, ನಯಾಜ್ ಸಂಘಟನೆಯ ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ