ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮನವಿ : ಶರಣಬಸನಗೌಡ ಪಾಟೀಲ್

 

ವರದಿ - ಮಂಜುನಾಥ್ ಕೋಳೂರು ಕೊಪ್ಪಳ 

ಕೊಪ್ಪಳ , ಆ. 06: - ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಿಗೆ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸನಗೌಡ ಪಾಟೀಲ್ ಹೇಳಿದರು.

ಅವರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಕರು, ತಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016 ರ ಮೊದಲು ನೇಮಕಾತಿ ಹೊಂದಿದವರಿಗೆ ಪೂರ್ವಾನ್ವಯಗೊಳಿಸಬಾರದು. ಆದರೆ, ಸರ್ಕಾರ ಪೂರ್ವಾನ್ವಯಗೊಳಿಸಿದ್ದರಿಂದ ಪ್ರಾಥಮಿಕ ಶಾಲಾ ಸೇವಾನಿರತ ಶಿಕ್ಷಕರಿಗೆ ಅನ್ಯಾಯವಾಗಿದೆ.ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡುವ,ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡುವ ಬಗ್ಗೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು, ರಾಜ್ಯ ಘಟಕದಿಂದ ಇದೇ ಆಗಸ್ಟ್ 12 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಒಂದು ದಿನದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.

ಮನವಿಯನ್ನು ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ , ಶಾಸಕ ಕೆ ರಾಘವೇಂದ್ರ ಹಿಟ್ನಾಳ್ , ಸಂಸದ ಕೆ ರಾಜಶೇಖರ್ ಹಿಟ್ನಾಳ್, ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು ಎಂದ ಅವರು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಆಗಮಿಸಿ ಪಾಲ್ಗೊಂಡು ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಭೂಮಕ್ಕನವರು ,ಜಿಲ್ಲಾ ಗೌರವಾಧ್ಯಕ್ಷ ಈರಪ್ಪ ಬಳ್ಳೊಳ್ಳಿ , ಜಿಲ್ಲಾ ಸಹ ಕಾಯದರ್ಶಿ ಬಸವರಾಜ್ ಕಮಲಾಪೂರ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*