ಅಪರಾಧ ತಡೆಗೆ ಸಹಕಾರ ಅಗತ್ಯ: ಪಿಎಸ್‌ಐ ತಾರಾಬಾಯಿ

 

ಮಸ್ಕಿ: ಸಮಾಜದಲ್ಲಿ ನಡೆಯುವ ಅನ್ಯಾಯ, ಅಪರಾಧಗಳಂತಹ ಪ್ರಕರಣಗಳ ಕಡಿವಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಪಿಎಸ್‌ಐ ತಾರಾಬಾಯಿ ಅವರು ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಪಟ್ಟಣದ ಸರಸ್ವತಿ ವಿದ್ಯಾನೀಕೇತನ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾನೂನು ಅರಿವು ಮತ್ತು ಆಯುಧಗಳ ಪರಿಚಯ ಹಾಗೂ ಪೊಲೀಸರು ಕಾರ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಎಂದರೆ ಭಯ ಪಡುವ ಅಗತ್ಯವಿಲ್ಲ, ಸಮಾಜದಲ್ಲಿ ನಡೆಯುವ ಅಹಿತಕರ ಘಟನೆ ಸೇರಿದಂತೆ ಅಕ್ರಮ ಚಟುವಟಿಕೆಗಳು ಕುರಿತು ಪೊಲೀಸರಿಗೆ ಮಾಹಿತಿ ನೀಡಲು ಪ್ರತಿಯೊಬ್ಬ ನಾಗರೀಕನು ಸಹಕರಿಸಬೇಕು ಎಂದರು. 

ಈ ಸಂದರ್ಭದಲ್ಲಿ ಎಎಸ್‌ಐ ಹುಲುಗಪ್ಪ, ಶಾಲೆಯ ಅಧ್ಯಕ್ಷ ಸಿದ್ದರಾಮ ಗಡ್ಡಿಮಠ, ಅಪರಾಧ ವಿಭಾಗದ ಪಿಎಸ್‌ಐ ಭೀಮದಾಸ್, ಪೊಲೀಸ್ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*

" ಶ್ರೀ ಗುರು ಕೊಟ್ಟೂರೇಶ್ವರ ಕಾರ್ತಿಕೋತ್ಸವದಲ್ಲಿ ಜಿಲ್ಲಾಧಿಕಾರಿಗಳು ಭಕ್ತಿ ಸಮರ್ಪಣೆ "