ರಾಜ್ಯಧ್ಯಕ್ಷರಾದ ಬಿ ದೊಡ್ಡ ಬಸಪ್ಪ ರೆಡ್ಡಿ : ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ

 

ವಿವಿಧ ಬೇಡಿಕೆಗಳನ್ನು ಈಡೇರಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಅವರಿಗೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರಸಂಘ (ರಿ)ದಿಂದ ಮನವಿ ನೀಡಲಾಯಿತು.

ಕೊಟ್ಟೂರು: ಬೆಂಗಳೂರು ದಿನಾಂಕ: 12.09.2024 ರಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರಸಂಘ (ರಿ) ದಾವಣಗೆರೆ ರಾಜ್ಯ ಘಟಕ ದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ, ಕಬ್ಬನ್ ಉದ್ಯಾನವನ ಬೆಂಗಳೂರು ರಲ್ಲಿ ಕರೆಯಲಾಗಿದ್ದ , ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಲಾಗಿದ್ದು.ಕಾರ್ಯಕಾರಿ ಸಮಿತಿಯ ಸರ್ವಸದಸ್ಯರು ಒಮ್ಮತದ ಅಭಿಪ್ರಾಯದ ಮೇರೆಗೆ ಈ ಕೆಳಕಂಡ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಈ ಕಾರ್ಯಕಾರಿಣಿ ಸಭೆಯಲ್ಲಿ

1. ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ.

2. ಹುದ್ದೆ ಮೇಲ್ದರ್ಜೆಗೇರಿಸುವ ಬಗ್ಗೆ (ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ)

3. ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹಾಗೂ ದ್ವಿತೀಯ ದರ್ಜೆ ಸಹಾಯಕರ ವೃಂದ ಸಂಖ್ಯೆಗಳನ್ನು ಒಟ್ಟುಗೂಡಿಸಿ ನೇಮಕಾತಿ ಪ್ರಾಧಿಕಾರವನ್ನು ಒಂದೇ ಮಾಡುವುದು.

4.ಕಂದಾಯ ಇಲಾಖಾ ನೌಕರರ ಜೇಷ್ಠತೆಯನ್ನು ರಾಜ್ಯಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸುವುದು.

5.ನೌಕರರ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ತಂತ್ರಾಂಶ ಅಭಿವೃದ್ಧಿಪಡಿಸಿ, ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸಲು ಇ-ಸೇವಾ ವ್ಯವಸ್ಥೆ ಜಾರಿಗೆ ತರುವ ಬಗ್ಗೆ.

6.ಮ್ಯುಟೇಷನ್ ಕಾಲಾವಧಿಯನ್ನು ವಿಸ್ತರಿಸುವ ಬಗ್ಗೆ.

7.ಗ್ರಾಮ ಆಡಳಿತ ಅಧಿಕಾರಿಗಳಿಗೆ ಪ್ರಥಮ ದರ್ಜೆ ಸಹಾಯಕ / ತತ್ಸಮಾನ ವೃಂದದ ಹುದ್ದೆಗಳಿಗೆ ಪದೋನ್ನತಿ ನೀಡುವ ಕುರಿತು.

8.ಗ್ರಾಮ ಸಹಾಯಕರಿಗೆ ಸೇವಾಭದ್ರತೆ ಒದಗಿಸುವುದು.

ಈ ಎಲ್ಲಾ ಬೇಡಿಕೆಗಳನ್ನು ಒಂದು ತಿಂಗಳ ಕಾಲಾವಧಿಯಲ್ಲಿ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡುವುದು, ನಿಗದಿತ ಅವಧಿಯಲ್ಲಿ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ಸಿಗದೇ ಇದ್ದಲ್ಲಿ ರಾಜ್ಯವ್ಯಾಪ್ತಿ ಅನಿರ್ಧಿಷ್ಟ ಅವಧಿಯ ಮುಷ್ಕರಕ್ಕೆ ಕರೆನೀಡಲು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ನೌಕರರನ್ನು ಮುಷ್ಕರಕ್ಕಿಳಿಸದೆ ಈ ಮೇಲ್ಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಸುಗಮ ಕರ್ತವ್ಯ ನಿರ್ವಹಣೆಗೆ ಅನುವು ಮಾಡಿಕೊಟ್ಟು ಸುಲಲಿತ ಸಾರ್ವಜನಿಕ ಸೇವೆಗೆ ಅವಕಾಶ ಮಾಡಿಕೊಡಲು ಈ ಮೂಲಕ ಮನವಿಮಾಡಲಾಯಿತು.

ಈ ಪತ್ರವನ್ನು ಮುಷ್ಕರದ ನೋಟೀಸು ಎಂದು ಪರಿಗಣಿಸಲು ಹಾಗೂ ಮುಂದೆ ಉದ್ಭವಿಸಬಹುದಾದ ಆಡಳಿತಾತ್ಮಕ ಸಮಸ್ಯೆಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂಬ ಅಂಶವನ್ನು ಗಮನಕ್ಕೆ ತರಲಾಯಿತು. ಈ ಪತ್ರದ ಮುಖಾಂತರ ವಿವಿಧ ಬೇಡಿಕೆಗಳನ್ನು ಪರಿಹರಿಸಲು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರಸಂಘ (ರಿ) ದಾವಣಗೆರೆ ರಾಜ್ಯ ಘಟಕ ದ ರಾಜ್ಯಧ್ಯಕ್ಷರಾದ ಬಿ ದೊಡ್ಡ ಬಸಪ್ಪ ರೆಡ್ಡಿ ಮತ್ತು ಸಂಘಟನೆಯ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ