ಪ್ರತಿಭಾ ಕಾರಂಜಿಯಲ್ಲಿ ಬಿಸಿಎಂ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಮಸ್ಕಿ : ಪಟ್ಟಣದ ನರಸನಗೌಡ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಇಲ್ಲಿನ ಮೊರಾರ್ಜಿ ದೇಸಾಯಿ (ಬಿಸಿಎಂ) ವಸತಿ ಶಾಲೆಯ ವಿದ್ಯಾರ್ಥಿನಿ ಅಶ್ವಿನಿ ಹಾಗೂ ಸಂಗಡಿಗರು ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. 

ಹಾಗೂ ಕ್ವೀಜ್ ಸ್ಪರ್ಧೆಯಲ್ಲಿ ಸುರೇಶ್, ಪುಟ್ಟರಾಜು ಪ್ರಥಮ ಸ್ಥಾನ ಪಡೆದುಕೊಂಡರು. ಪ್ರಬಂಧ ಹಾಗೂ ಕವನ ವಾಚನದಲ್ಲಿ ವಿದ್ಯಾರ್ಥಿನಿ ಅನುಹಾಗೂ ಪೂಜಾ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆಶು ಭಾಷಣ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ನಾಗವೇಣಿ ಹಾಗೂ ಚಂದನ್ ಎಂ ತೃತೀಯ ಸ್ಥಾನವನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸಂಗಪ್ಪ ಕೊಳ್ಳಿ ತಿಳಿಸಿದ್ದಾರೆ. ಸಂಗೀತ ಶಿಕ್ಷಕ ಅಖಂಡಯ್ಯ ಹಿರೇಮಠ ಅವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*