ತಾ.ಪಂ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ

ಮಸ್ಕಿ : ಇಂದು ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ.ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕರಾದ ಆರ್. ಬಸನಗೌಡ ತುರುವಿಹಾಳ ರವರು ಹಲವಾರು ವಿಷಯಗಳನ್ನು

ಪ್ರಸ್ತಾಪಿಸಿ ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಕುಡಿಯುವ ನೀರು ಸರಬರಾಜು, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮುಖ್ಯವಾಗಿ ರೈತರಿಗಾಗಿ,ಮಕ್ಕಳಿಗಾಗಿ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಆದಷ್ಟೂ ಬೇಗನೆ ಸಮಸ್ಯೆಯನ್ನು ಬಗೆಹರಿಸಿ ಈ ಮೂರು ವಿಷಯಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲಾ ಆದ್ದರಿಂದ ಕಾರ್ಯ ಮುಕ್ತಾಯದ ನಂತರ ತಿಳಿಸಿ ನಾನು ಸ್ಥಳಕ್ಕೆ ಭೇಟಿ ನೀಡುವೆ ಹಾಗೆಯೇ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಈ ವೇಳೆ, ತಹಶೀಲ್ದಾರರಾದ ಡಾ. ಮಲ್ಲಪ್ಪ.ಕೆ.ಯರಗೋಳ ,ತಾಲ್ಲೂಕು ಪಂಚಾಯತಿ ಅಧಿಕಾರಿ ಅಮರೇಶ್ ,ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ಮೈಬೂಬ್ ಸಾಬ ,ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*