ಡಿವಿಪಿ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಯಚೂರು ವಿ.ವಿ ಕುಲಪತಿಗಳಿಗೆ ಮನವಿ

ಮಸ್ಕಿ : ರಾಯಚೂರು ವಿಶ್ವವಿದ್ಯಾಲಯದ 2024/25 ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕವನ್ನು ಕಡಿಮೆ ಮಾಡಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳ ಅಂಕಪಟ್ಟಿ ಮುದ್ರಿಸಿ ಒದಗಿಸಲು ಒತ್ತಾಯಿಸಿ ಮನವಿ .

ಈ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಸಮಿತಿ ಮಸ್ಕಿ ವತಿಯಿಂದ ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ರಾಯಚೂರು ವಿಶ್ವವಿದ್ಯಾಲಯ 2024-25 ನೆಯ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸ್ನಾತಕೋತ್ತರ ಪದವಿಗಳಿಗಾಗಿ ಪ್ರವೇಶಕ್ಕೆ ಪ್ರಕಟಣೆಯನ್ನು ಹೊರಡಿಸಿದೆ, ಇದರ ಪ್ರಕಾರ ಸಾಮಾನ್ಯ ವಿದ್ಯಾರ್ಥಿಗೆ ಪ್ರತಿ ವಿಭಾಗಕ್ಕೆ ಪ್ರವೇಶವನ್ನು ಸಲ್ಲಿಸಲು rs 800.00 ಹಾಗೂ ಎಸ್ಸಿ ಮತ್ತು ಎಸ್ ಟಿ ವರ್ಗದವರಿಗೆ Rs 400.00 ಅನ್ನು ನಿಗದಿಪಡಿಸಿದೆ. 

ಒಂದು ವಿದ್ಯಾರ್ಥಿ ಹಲವು ವಿಭಾಗಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ಪ್ರತಿ ಅರ್ಜಿಗೂ ಪ್ರತ್ಯೇಕವಾಗಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

ಇದು ನಮ್ಮ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಆರ್ಥಿಕವಾಗಿ ಬಹಳ ಹೊರೆಯನ್ನು ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ಬೇರೆ ವಿಶ್ವವಿದ್ಯಾಲಯಗಳು ಇದೆ ಪ್ರವೇಶತಿಗಾಗಿ 200 ರಿಂದ400 ನಿಗದಿಪಡಿಸಿವೆ. ಆದರೆ ನಮ್ಮ ವಿಶ್ವವಿದ್ಯಾಲಯ ಅತಿ ಹೆಚ್ಚಿನ ಅರ್ಜಿ ಶುಲ್ಕವನ್ನು ನಿಗದಿ ಮಾಡಿದ್ದು ಸಮಂಜಸವಲ್ಲ. 

ಆದ್ದರಿಂದ ತಾವುಗಳು ಈ ಕುರಿತಂತೆ ಗಮನವರಿಸಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಹಾಗೂ ವಿಭಾಗಗಳಿಗೆ ಪ್ರವೇಶಾತಿಯನ್ನು ಹೆಚ್ಚಿಸುವ ಸಲುವಾಗಿ ಅರ್ಜಿ ಶುಲ್ಕವನ್ನು ಕಡಿಮೆಗೊಳಿಸಬೇಕು.

ಮತ್ತು ಈಗಾಗಲೇ ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಒಂದು ವರ್ಷ ಕಳೆಯುತ್ತಾ ಬಂದರೂ ಕೂಡ ಇನ್ನುವವರೆಗೂ ಅಂಕಪಟ್ಟಿ ವಿತರಿಸಲಾಗಿಲ್ಲ, ಆದ್ದರಿಂದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಹಾಗೂ ಸರ್ಕಾರಿ ಸೌಲಭ್ಯವನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ ಆದ್ದರಿಂದ ಕೂಡಲೇ ಎಲ್ಲಾ ವಿಭಾಗದ ಅಂಕ ಪಟ್ಟಿಯನ್ನು ಕೂಡ ವಿತರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಉಪ ತಹಶೀಲ್ದಾರ ಪ್ರಕಾಶ್ ಬುಳ್ಳಾ ಇವರಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷರಾದ ಮೌನೇಶ ತುಗ್ಗಲದಿನ್ನಿ, ತಾಲೂಕ ಪ್ರಧಾನ ಕಾರ್ಯದರ್ಶಿ ಹುಸೇನಪ್ಪ ಇರಕಲ್, ವಿದ್ಯಾರ್ಥಿ ಮುಖಂಡರಾದ ಅನಿಲ್ ಕುಮಾರ್,ಮೌನೇಶ, ಶೃತಿ,ವಿಜಯಲಕ್ಷ್ಮಿ,ಶೋಭಾ ಚಂದ್ರು,ವಿರೇಶ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ