ಐದು ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಲಿ ರಾಜ್ಯ ಗ್ಯಾಂರಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷರಾದ ಶ್ರೀ ಕುರಿ ಶಿವಮೂರ್ತಿ ಹೇಳಿಕೆ

 

ಕೊಟ್ಟೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರಾಜ್ಯ ಗ್ಯಾಂರಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷರಾದ ಶ್ರೀ ಕುರಿ ಶಿವಮೂರ್ತಿ ಅವರು ಹೇಳಿದರು.

ಕೊಟ್ಟೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಐದು ಗ್ಯಾಂರಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಅನ್ನಭಾಗ್ಯ, ಗಹಲಕ್ಷ್ಮೀ, ಮಹಿಳೆಯರ  ಸ್ತ್ರೀ ಶಕ್ತಿ  ಯೋಜನೆ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳು ಶೇ.100% ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಶ್ರಮವಹಿಸುವುದು ಅಗತ್ಯವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಎರಡು ಸಭೆಗಳನ್ನು ನಡೆಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗ ಸೂಚಿಸಿದರು.

ಯೋಜನೆ ಜಾರಿಯಾದಾಗಿಬಿಂದ ಇಲ್ಲಿಯ ವರೆಗಿನ ಪ್ರಗತಿಯ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಬಿ.ಆನಂದಕುಮಾರ್, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಎಚ್.ವಿಜಯಕುಮಾರ್, 

ಗ್ಯಾಂರಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷರಾದ ಸೊನ್ನದ ಗುರಬಸವರಾಜ, ಸಮಿತಿಯ ಸದಸ್ಯರಾದ, ಪರಶುರಾಮ, ಬಸವರಾಜ ಗೌಡರ, ಜೀಲಾನ ಅವರು, ಐದು ಗ್ಯಾಂರಟಿ ಯೋಜನೆಗಳ ತಾಲ್ಲೂಕು ಸಂಬಂಧಪಟ್ಟ ಅಧಿಕಾರಿಗಳು, ತಾಪಂ ವ್ಯವಸ್ಥಾಪಕರಾದ ಶ್ರೀಮತಿ ಪುಷ್ಪಲತಾ ಅವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ